ಇದು ಪ್ಯಾಕೇಜ್ ಅಲ್ಲ, ಮತ್ತೊಂದು ಸುಳ್ಳು : ರಾಹುಲ್ ಗಾಂಧಿ
ನವದೆಹಲಿ : ಕೊರೊನಾ ಸೋಂಕು ಹಿನ್ನಲೆಯಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಿನ್ನೆ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ್ದು, ಈ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕೆ ಮಾಡಿದ್ದಾರೆ.
ನಿನ್ನೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ ಆರ್ಥಿಕ ಪ್ಯಾಕೇಜ್ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ಯಾವುದೇ ಕುಟುಂಬವು ತಮ್ಮ ಜೀವನ-ಆಹಾರ-ಔಷಧಿ-ಮಗುವಿನ ಶಾಲಾ ಶುಲ್ಕಕ್ಕಾಗಿ ಈ ಹಣವನ್ನು ಖರ್ಚು ಮಾಡಲು ಸಾಧ್ಯವಿಲ್ಲ. ಇದು ಪ್ಯಾಕೇಜ್ ಅಲ್ಲ ಮತ್ತೊಂದು ಸುಳ್ಳು ಎಂದು ಹಿಂದಿಯಲ್ಲಿ ಬರೆದುಕೊಂಡಿದ್ದಾರೆ.
ಸೋಮವಾರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕತೆಯ ಪುನಶ್ಚೇತನಕ್ಕಾಗಿ ಮತ್ತೊಂದು ಆರ್ಥಿಕ ನೆರವಿನ ಪ್ಯಾಕೇಜ್ ಘೋಷಿಸಿದ್ದಾರೆ. ಅದರಲ್ಲಿ ಸಣ್ಣ ಮತ್ತು ಮಧ್ಯಮ ವರ್ಗದ ಉದ್ಯಮಿಗಳಿಗಾಗಿ 1.1 ಲಕ್ಷ ಕೋಟಿಗಳ ಸಾಲ ಖಾತರಿ ಯೋಜನೆ ಪ್ರಕಟಿಸಿದ್ದಾರೆ. ಇದರ ಜತೆಗೆ, ಆರೋಗ್ಯ ಕ್ಷೇತ್ರ, ಪ್ರವಾಸೋದ್ಯಮ ಏಜೆನ್ಸಿ ಹಾಗೂ ಟೂರ್ ಗೈಡ್‍ಗಳಿಗೆ ಸಾಲ ಸೌಲಭ್ಯ, ವಿದೇಶಿ ಪ್ರವಾಸಿಗರಿಗೆ ವೀಸಾ ಶುಲ್ಕ ವಿನಾಯಿತಿ ಸೇರಿದಂತೆ ಹಲವು ಕ್ರಮಗಳೂ ಪ್ಯಾಕೇಜ್‍ನಲ್ಲಿವೆ.