ಕೊಪ್ಪಳ : ಸಿದ್ದರಾಮಯ್ಯ ಅವರು ಹೇಳಿದಂತೆ ಧಮ್ಮು, ಕೆಮ್ಮು ಪರೀಕ್ಷೆ ಮಾಡುವ ಸಮಯವಿದಲ್ಲ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದಾರೆ.
ಇಂದು ಕೊಪ್ಪಳದಲ್ಲಿ ಮಾತನಾಡಿದ ಕೃಷಿ ಸಚಿವ ಬಿ.ಸಿ ಪಾಟೀಲ್ ಸಿದ್ದರಾಮಯ್ಯ ಅವರು ಹೇಳಿದಂತೆ ಧಮ್ಮು, ಕೆಮ್ಮು ಪರೀಕ್ಷೆ ಮಾಡುವ ಸಮಯವಿದಲ್ಲ. ಧಮ್ ಇವೆಲ್ಲ ಯಾವ ಭಾಷೆಯ ಪದಗಳಿವು. ಧಮ್ ತೋರಿಸುವಂತಂದು ಏನಿದೆ. ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಅನುದಾನವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಂದಿದ್ದಾರೆ.
ಅಲ್ಲದೆ ನಮ್ಮ ರಾಜ್ಯಕ್ಕೆ ಕೇಂದ್ರದಿಂದ ಬರಬೇಕಿದ್ದ ಹಣ ಬಂದಿದೆ. ಜೊತೆಗೆ ಸಿಎಂ ಯಡಿಯೂರಪ್ಪ ಅವರಿಗೆ ವಯಸ್ಸಾಗಿದ್ದರೂ, ದಿನಕ್ಕೆ ಹತ್ತು ರಿಂದ ಹದಿನೈದು ಸಭೆಗಳನ್ನು ಮಾಡುತ್ತಾರೆ. ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಹೊರ ರಾಜ್ಯದಿಂದ ಬರುವವರ ಸಂಖ್ಯೆ ಹೆಚ್ಚಾಗಿದೆ. ಒಂದು ವೇಳೆ ಹೊರ ರಾಜ್ಯದಿಂದ ಬರದೆ ಹೋಗಿದ್ದರೆ, ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಶ್ಯೂನವಾಗಿರುತ್ತಿದ್ದವು.
ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರು, ವಿರೋಧ ಮಾಡುವುದೇ ಅವರ ಕೆಲಸ. ಅವರು ವಿರೋಧಿಸುವುದನ್ನೇ ತಮ್ಮ ಆದ್ಯ ಕರ್ತವ್ಯ ಎಂದಕೊಂಡಿರಬೇಕು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಸಿದ್ದರಾಮಯ್ಯಗೆ ವ್ಯಂಗ್ಯ ಮಾಡಿದರು.