ಭೇಲಿನೇ ಎದ್ದು ಹೊಲ ಮೇಯ್ದಂತೆ ಎಂಬ ಮಾತು ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ ಅವರಿಗೆ ಹೇಳಿ ಮಾಡಿಸಿದಂತೆ ಇದೆ. ಕೊರೊನಾ ಭೀತಿಯಿಂದ ಇಡಿ ದೇಶವೇ ಲಾಕ್ ಡೌನ್ ಆಗಿದೆ. ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿ, ಹೊರ ಬಂದವರಿಗೆ ಪೊಲೀಸರು ಕಜ್ಜಾಯ ಕೊಡುತ್ತಿದ್ದಾರೆ. ಅಲ್ಲದೆ ಮನೆಯಿಂದ ಹೊರ ಬರಬೇಡಿ ಎಂದು ಸಾಕಷ್ಟು ಜನ ಪ್ರತಿನಿಧಿಗಳು ಹೇಳುತ್ತಿದ್ದಾರೆ. ಆದರೆ ತುಮಕೂರು ಜಿಲ್ಲೆಯ ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಅವರು ಮಾತ್ರ ನಿಯಮ ಉಲ್ಲಂಘನೆ ಮಾಡಿ ರಸ್ತೆಯಲ್ಲಿ ಮೊಮ್ಮಗ ಜೊತೆ ಕಾಲ ಕಳೆದಿದ್ದಾರೆ
ಒಂದಡೆ ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿ ಮನೆ ಹೊರ ಬಂದ್ರೆ ಜೈಲಿಗೆ ಕಳಿಸುವ ಕೆಲಸ ನಡೆಯುತ್ತಿದೆ. ಮತ್ತೊಂದೆಡೆ ಶಾಸಕ ಶ್ರೀನಿವಾಸ್ ಅವರು ನಿಯಮ ಉಲ್ಲಂಘನೆ ಮಾಡಿ ತಮ್ಮ ಮೊಮ್ಮಗನ ಜೊತೆ ರಸ್ತೆಯಲ್ಲಿ ಆಟವಾಡುತ್ತಿದ್ದಾರೆ. ತುಮಕೂರು – ಶಿವಮೊಗ್ಗ ಹೆದ್ದಾರಿಯಲ್ಲಿರುವ ಎಸ್.ಪಿ ಕಛೇರಿ ಮುಂಭಾಗದಲ್ಲಿ ಶಾಸಕರು ನಿಯಮ ಉಲ್ಲಂಘನೆ ಮಾಡಿದ್ದಾರೆ ಎನ್ನಲಾಗಿದೆ. ರಸ್ತೆಯಲ್ಲಿ ಮೊಮ್ಮಗ ಜೊತೆ ಆಟವಾಡಿರುವ ದೃಶವೊಂದು ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ. ಆದರೆ ಈ ಬಗ್ಗೆ ಶಾಸಕ ಶ್ರೀನಿವಾಸ್ ಸ್ಪಷ್ಟಣೆ ನೀಡಬೇಕಿದೆ.