ಉತ್ತರ ಕನ್ನಡ: ಪ್ರವಾಸಕ್ಕೆಂದು ಆಗಮಿಸಿದ್ದ ಇಬ್ಬರು ನೀರು ಪಾಲಾಗಿರುವ ಘಟನೆ ನಡೆದಿದೆ.
ಈ ಘಟನೆ ಗೋಕರ್ಣ(Gokarna)ದಲ್ಲಿ ನಡೆದಿದೆ. ಪ್ರವಾಸಕ್ಕೆ ಬಂದಿದ್ದ ಐವರು ಸ್ನೇಹಿತರ ಪೈಕಿ ಇಬ್ಬರು ನೀರಲ್ಲಿ ಮುಳಿಗು ಸಾವನ್ನಪ್ಪಿದ್ದಾರೆ.
ಕಲಬುರಗಿ (Kalaburagi) ಮೂಲದ ಆಕಾಶ ಹಾಗೂ ಅಭಿಷೇಕ ಸಾವನ್ನಪ್ಪಿದ ದುರ್ದೈವಿಗಳು. ಬೀಚ್ ನಲ್ಲಿ ಬೋಟ್ ಓಡಿಸುತ್ತಿದ್ದ ಸಂದರ್ಭದಲ್ಲಿ ಅಲೆಗಳ ರಭಸಕ್ಕೆ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಈ ಕುರಿತು ಗೋಕರ್ಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.