ರಾಮನಗರ: ರೈತರಿಗೆ ಅನುಕೂಲ ಮಾಡದವರು ಮಣ್ಣಿನ ಮಕ್ಕಳು ಎಂದು ಕರಿಸಿಕೊಳ್ತಾರೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮಾಗಡಿ (Magadi) ಪಟ್ಟಣದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮದಲ್ಲಿ ಹಾಲಿನ ಬೆಲೆ ಏರಿಕೆಗೆ ಬಿಜೆಪಿ-ಜೆಡಿಎಸ್ (BJP-JDS) ಆರೋಪಿಸಿರುವ ಕುರಿತು ಮಾತನಾಡಿದರು. ಹಾಲಿಗೆ 5 ರೂ.ಗಳ ಪ್ರೋತ್ಸಾಹಧನ ಘೋಷಿಸಿದ್ದು ನಮ್ಮ ಸರ್ಕಾರ. ಕ್ಷೀರಭಾಗ್ಯ ಯೋಜನೆ ಜಾರಿಗೆ ತಂದಿದ್ದು ನಮ್ಮ ಸರ್ಕಾರ. ರೈತರಿಗೆ ಹೆಚ್ಚಿನ ಹಣ ಸೇರಲಿ ಎಂಬ ಕಾರಣಕ್ಕೆ ಈ ರೀತಿ ಮಾಡಿದ್ದೇವೆ ಎಂದು ಹೇಳಿದ್ದಾರೆ.
ಆದರೆ, ಇನ್ನೂ ಕೆಲವರು ರೈತರಿಗೆ ಏನೂ ಮಾಡದೆ ಮಾಡದೆ ರೈತರ ಮಕ್ಕಳು ಎಂದು ಕರೆಯಿಸಿಕೊಳ್ಳುತ್ತಾರೆ. ಅವರಿಗೆ ರೈತರ ಮಕ್ಕಳು, ಮಣ್ಣಿನ ಮಕ್ಕಳು ಎನ್ನುತ್ತಾರೆ. ದೇಶದ ಸ್ವಾತಂತ್ರ‍್ಯಕ್ಕೆ ದುಡಿದ ನೆಹರೂರವರು ಹಾಗೂ ಇಂದಿರಾಗಾಂಧಿ ಸೇರಿದಂತೆ ಹಲವು ನಾಯಕರು ದೇಶಕ್ಕಾಗಿ ದುಡಿದಿದ್ದಾರೆ. ನರೇಂದ್ರ ಮೋದಿ ಸುಳ್ಳು ಹೇಳುತ್ತಾರೆ ಎನ್ನುವುದು ತಿಳಿಯುತ್ತಿದ್ದಂತೆ ಅವರನ್ನು ಜನ ತಿರಸ್ಕರಿಸಿದರು ಎಂದು ಹೇಳಿದ್ದಾರೆ.
ಸಾಲದ ಮೊತ್ತ 53.11 ಲಕ್ಷ ಕೋಟಿ ರೂ.ಯಿದ್ದದ್ದು ಈಗ ಕಳೆದ 10 ವರ್ಷದಲ್ಲಿ 182 ಲಕ್ಷ ಕೋಟಿ ರೂ.ಗೆ ತಲುಪಿದೆ. ಗರೀಬಿ ಹಠಾವೋ, ಆಹಾರ ಸ್ವಾವಲಂಬನೆಯಂತ ಜನಪರ ಕಾರ್ಯಕ್ರಮಗಳನ್ನು ಕಾಂಗ್ರೆಸ್ ಪಕ್ಷ ದೇಶಕ್ಕೆ ಕೊಟ್ಟಿದೆ.ಆದರೆ, ಇವರು ದೇಶ ಹಾಳು ಮಾಡುತ್ತಿದ್ದಾರೆ ಎಂದು ಗುಡುಗಿದ್ದಾರೆ.