ನೋಯ್ಡಾ: ಕಾಯಿಲ್ ಹೀಟರ್ ಹಾಕಿ ಮಲಗಿದ್ದವರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಳಿಯ ಹಿನ್ನೆಲೆಯಲ್ಲಿ ಬೆಡ್ ರೂಮ್ ನಲ್ಲಿ ಕಾಯಿಲ್ ಹೀಟರ್ ಹಾಕಿಕೊಂಡು ಮಲಗಿದ್ದ ಮೂವರ ಪೈಕಿ ತಂದೆ ಹಾಗೂ ಮಗ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಈ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ.
ಅಲ್ಲದೇ, ಘಟನೆಯಲ್ಲಿ ಬಾಲಕಿಯು ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಟರ್ನಿಂದ ಕಾರ್ಬನ್ ಮಾನಾಕ್ಸೈಡ್ ಹೊಗೆ ಬಿಡುಗಡೆಯಾಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಬೆಳಿಗ್ಗೆ ಮನೆಯವರು ಬಂದು ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿರುವುದನ್ನು ಕಂಡು ಅಕ್ಕಪಕ್ಕದವರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಇಬ್ಬರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದು, ಬಾಲಕಿಯ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.