ಮಡಿಕೇರಿ: ಮೂರು ಮಕ್ಕಳನ್ನು ನಾಲೆಗೆ ತಳ್ಳಿ ತಾಯಿಯೂ ನಾಲೆಗೆ ಹಾಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕು ತೊರೆನೂರು ಬಳಿ ನಡೆದಿದೆ.
ಹಾರಂಗಿ ಎಡದಂಡೆ ನಾಲೆಯಲ್ಲಿ ಮೂರು ಮಕ್ಕಳ ಮೃತದೇಹ ಪತ್ತೆಯಾಗಿದ್ದು, ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ನಾಲೆಯಲ್ಲಿ ಮೃತದೇಹ ತೇಲುವುದು ಕಂಡುಬಂದ ಹಿನ್ನೆಲೆಯಲ್ಲಿ ಸ್ಥಳೀಯರಿಂದ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಗ್ರಾಮಸ್ಥರಿಂದ ರಕ್ಷಣಾ ಕಾರ್ಯ ನಡೆದಿದ್ದು, ಸ್ಥಳಕ್ಕೆ ರಕ್ಷಣಾ ತಂಡ ದೌಡಾಯಿಸಿದ್ದು, ತಾಯಿಗಾಗಿ ಶೋಧ ಕಾರ್ಯ ನಡೆದಿದೆ.

ರೈತರು ಜಮೀನಿಗೆ ನೀರು ಹಾಯುಸುವ ಸಂದರ್ಭ ನಾಲೆಯಲ್ಲಿ ಮೃತದೇಹಗಳು ತೇಲಿ ಬಂದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಮೃತ ಮಕ್ಕಳನ್ನು ವಿಜಯ್(5), ವಿನಯ್(3), ದೀಕ್ಷಾ(1.5) ಎಂದು ಗುರುತಿಸಲಾಗಿದೆ. ತಾಯಿ ಚೆನ್ನಮ್ಮ ನಾಪತ್ತೆಯಾಗಿದ್ದು, ಅಗ್ನಿಶಾಮಕ ದಳದಿಂದ ಶೋಧ ಕಾರ್ಯ ತೀವ್ರಗೊಳಿಸಲಾಗಿದೆ.
ದಾವಣಗೆರೆ ಮತ್ತು ಚಿತ್ರದುರ್ಗದಿಂದ ಶುಂಠಿ ಕೆಲಸಕ್ಕೆ ವಲಸೆ ಬಂದ ಕಾರ್ಮಿಕರು ತಂಡದವರ ಮಕ್ಕಳು ಎಂದು ಶಂಕಿಸಲಾಗಿದೆ. ಕೌಟಂಬಿಕ ಕಲಹ ಹಿನ್ನೆಲೆಯಲ್ಲಿ ಬಟ್ಟೆ ತೊಳೆಯಲು ತೆರಳಿದ್ದ ಸಂದರ್ಭದಲ್ಲಿ ಮಕ್ಕಳನ್ನೂ ತಳ್ಳಿ ನಾಲೆಗೆ ತಳ್ಳಿ ತಾಯಿ ಚೆನ್ನಮ್ಮ ತಾನೂ ನಾಲೆಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








