ವಿಜಯಪುರ : ಗುಮ್ಮಟ ನಗರಿಯಲ್ಲಿ ಇಬ್ಬರು ಆಶಾ ಕಾರ್ಯಕರ್ತೆಯರು, ಹಾಗೂ ಓರ್ವ ಅಂಗನವಾಡಿ ಕಾರ್ಯಕರ್ತೆಗೆ ಕೊರೊನಾ ಸೋಂಕು ತಗುಲಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ವೈ. ಎಸ್. ಪಾಟೀಲ ಹೇಳಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್, ಇಬ್ಬರು ಆಶಾ ಕಾರ್ಯಕರ್ತೆಯರು ಕಂಟೇನ್ಮೆಂಟ್ ಏರಿಯಾದಲ್ಲಿ ಕೆಲಸ ಮಾಡಿದ್ದರು.ಅಂಗನವಾಡಿ ಸುಪರವೈಸರ್ ಸಹ ಕಂಟೇನಮೆಂಟ್ ಏರಿಯಾದಲ್ಲಿ ವಾಸಿಸುತ್ತಿದ್ದರು.ಮೂರೂ ಜನರಲ್ಲಿ ಕೊರೋನಾ ಸೋಂಕಿನ ಲಕ್ಷಣವಿರಲಿಲ್ಲ.ಸ್ವಾಬ್ ಟೆಸ್ಟ ಮಾಡಿದ ಹಿನ್ನಲೆ ಕೊರೋನಾ ಪಾಸಿಟಿವ್ ದೃಢವಾಗಿದೆ. ಆಶಾ ಕಾರ್ಯಕರ್ತೆಯರ ಜೊತೆ ಸಂಪರ್ಕದಲ್ಲಿದ್ದ ಅಂಗನವಾಡಿ ಸುಪರ್ ವೈಸರ್ ಸೋಂಕು ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.








