ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಭಾರಿ ಮಳೆ
ಬೆಂಗಳೂರು : ರಾಜ್ಯದಲ್ಲಿ ಮಳೆರಾಯನ ಅಬ್ಬರ ಮುಂದುವರೆಯಲಿದ್ದು, ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್, ಇನ್ನೂ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಾಗಿ ಮಳೆ ಆಗುವ ಸಾಧ್ಯತೆಗಳಿವೆ.
ಈ ಹಿನ್ನೆಲೆಯಲ್ಲಿ ಈ ಎಲ್ಲಾ ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ನವೆಂಬರ್ 16 ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.
ಇತ್ತ ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು,
ರಾಮನಗರ, ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ,
ಬಾಗಲಕೋಟೆ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಇಂದಿನಿಂದ ನವೆಂಬರ್ 16 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಈ ಕಾರಕ್ಕಾಗಿ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.