ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರಿ ವರ್ಷಧಾರೆ karnataka
ಬೆಂಗಳೂರು : ಮುಂದಿನ ಮೂರು ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಸಾಧಾರಣದಿಂದ ಹಗುರ ಮಳೆಯಾಗುವ ಸಾಧ್ಯತೆ ಇದೆ. ಆದರೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ಹೆಚ್ಚಿರುತ್ತದೆ.
ಬೆಂಗಳೂರು ನಗರ, ಮೈಸೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಮಂಡ್ಯ, ತುಮಕೂರಿನಲ್ಲಿ ಮುಂದಿನ ಮೂರು ದಿನ ಮಳೆ ಜೋರಿರಲಿದೆ ಎಂದು ಇಲಾಖೆ ತಿಳಿಸಿದೆ.
ಇದಲ್ಲದೆ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ.
ಸದ್ಯ ರಾಜ್ಯ ರಾಜಧಾನಿ ಬೆಂಗಳುರಿನಲ್ಲಿ ಮಳೆ ಸುರಿಯುತ್ತಿದೆ.






![pandavapura-free-health-camp-darshan-puttannaiah-october-8]](https://saakshatv.com/wp-content/uploads/2026/10/darsan-350x250.png)


