KSRTC – ಇನ್ನೋವಾ ಕಾರಿನ ನಡುವೆ ಅಫಘಾತ – 6 ತಿಂಗಳ ಮಗು ಸಾವು
ಕೆಎಸ್ಆರ್ಟಿಸಿ ಬಸ್ ಹಾಗೂ ಇನ್ನೋವಾ ಕಾರಿನ ಮಧ್ಯೆ ಭೀಕರ ಅಪಘಾತದ ಸಂಭವಿಸಿದ ಪರಿಣಾಮ ಉಡುಪಿ ಮೂಲದ ಮೂವರು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಕೆಮ್ಮಲ್ಲಿ ದೊಡ್ಡಿ ಗ್ರಾಮದ ಬಳಿ ನಡೆದಿದೆ.
ಮೃತಪಟ್ಟವರನ್ನ ಅಕ್ಷತಾ, ಡ್ರೈವರ್ ಉಮೇಶ್ ಹಾಗೂ 6 ತಿಂಗಳು ಮಗು ಸುಮಂತ್ ಎಂದು ಗುರುತಿಸಲಾಗಿದೆ. ಮತ್ತಿಬ್ಬರಿಗೆ ಸಣ್ಣಪುಟ್ಟ ಗಾಯವಾಗಿದೆ. ಗಾಯಗೊಂಡವರನ್ನ ಕನಕಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಬೆಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.
ಕಾರು ಚಾಲಕನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಕಾರು ಸಂಪೂರ್ಣ ಜಖಂ ಗೊಂಡಿದ್ದು ಸಾತನೂರು ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.
KSRTC BUS AND CAR COLLISION near kanakapura