ಕೊಪ್ಪಳ: ಕಂಟೈನರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಹೊರವಲಯದಲ್ಲಿ ಸಂಭವಿಸಿದೆ.
ಕಂಟೈನರ್ಗೆ ಕಾರು ಡಿಕ್ಕಿಯಾಗಿ ಮುದ್ದೇಬಿಹಾಳ ಮೂಲದ ಗೌರಮ್ಮ ಹನುಮಗೌಡ ಕನ್ನೂರು(60). ಪ್ರವೀಣ್ ಕುಮಾರ್(27), ಸುರೇಶ್ ಈರಸಂಗಪ್ಪ(43) ಸಾವನ್ನಪ್ಪಿದ್ದಾರೆ. ಕುಷ್ಟಗಿ ಠಾಣೆ ಪೊಲೀಸರು ಅಪಘಾತ ಸ್ಥಳಕ್ಕೆ ಭೇಟಿ ನೀಡಿದ್ದು, ಮೃತ ದೇಹಗಳನ್ನ ಕುಷ್ಟಗಿ ತಾಲೂಕು ಆಸ್ಪತ್ರೆಗೆ ಸಾಗಿಸಲಾಗಿದೆ.
ಈ ಅಪಘಾತಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಪ್ರತಿಕ್ರಿಯಿಸಿದ್ದು, ಮದುವೆ ಮುಗಿಸಿಕೊಂಡು ಮರಳಿ ಊರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ದಾವಣೆಗೆರೆಯಿಂದ ಮದುವೆ ಮಗಿಸಿಕೊಂಡು ಮುದ್ದೇಬಿಹಾಳಕ್ಕೆ ತೆರಳುತ್ತಿದ್ದರು. ಈ ವೇಳೆ ಈ ಘಟನೆ ನಡೆದಿದೆ. ವೇಗವಾಗಿ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಲಾರಿ ಹಿಂಬದಿಗೆ ಗುದ್ದಿದೆ. ಹೀಗಾಗಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುತ್ತಿದ್ದ ಸಂದರ್ಭದಲ್ಲಿ ಸಾವನ್ನಪ್ಪಿದ್ದಾರೆ. ಮರಣೋತ್ತರ ಪರೀಕ್ಷೆ ಮಾಡಿ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರಿಸುತ್ತೇವೆ ಎಂದು ಮಾಹಿತಿ ನೀಡಿದರು.







