ಕಾರುಗಳ ನಡುವೆ ಮುಖಾ ಮುಖಿ ಡಿಕ್ಕಿ – 3 ಸಾವು ನಾಲ್ವರು ಗಂಭೀರ

1 min read

ಕಾರುಗಳ ನಡುವೆ ಮುಖಾ ಮುಖಿ ಡಿಕ್ಕಿ – 3 ಸಾವು ನಾಲ್ವರು ಗಂಭೀರ

ಎರಡು ಕಾರುಗಳ ನಡುವೆ ಭೀಕರ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಗುರುಗುಂಟಾದ ಗೋಲಪಲ್ಲಿ ಎಂಬಲ್ಲಿ ನಡೆದಿದೆ.

ಬೆಂಗಳೂರಿನಿಂದ ಯಾದಗಿರಿಗೆ ಕಡೆಗೆ ಸಂಚರಿಸುತ್ತಿದ್ದ ಕಾರು ಹಾಗು ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಉಂಟಾಗಿದೆ.  ಬೆಂಗಳೂರಿನಿಂದ ಬರುತ್ತಿದ್ದ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವಿನ್ನಪ್ಪಿದ್ದಾರೆ.  ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.  ಗಾಯಾಳುಗಳನ್ನು ಲಿಂಗಸೂಗೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತಪಟ್ಟವರನ್ನ ಯಾದಗಿರಿ ಜಿಲ್ಲೆಯ ವಡಗೇರ ಗ್ರಾಮದ ಅಮರೇಶ್ (30), ಗೋವಿಂದ್ (35) ದೇವರಾಜ್ (34) ಮೃತಪಟ್ಟವರೆಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಮದುವೆಗೆಂದು ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಘಟನೆ ಜರುಗಿದೆ. ಘಟನಾ ಸ್ಥಳಕ್ಕೆ ಹಟ್ಟಿ ಪೊಲೀಸ್‌ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Tumakuru: ಗ್ರಾಮಕ್ಕೆ ನೀರಿನ ಸೌಕರ್ಯ ಕೇಳಿದ ಯುವಕನಿಗೆ ಕಾಂಗ್ರೆಸ್ ಶಾಸಕರಿಂದ ಕಪಾಳ ಮೋಕ್ಷ

ಮೈಸೂರಿನ ಪಾರಂಪರಿಕ ಕಟ್ಟಡ, ದೇವರಾಜ ಮಾರುಕಟ್ಟೆ ನೆಲಸಮಕ್ಕೆ ವರ್ತಕರಿಂದ ವಿರೋಧ

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd