ಮೂವರು ಉಗ್ರರನ್ನು ಬಂಧಿಸಿದ ಭಾರತೀಯ ಸೇನೆ
ಜಮ್ಮು&ಕಾಶ್ಮೀರ್: ಕೇಂದ್ರಾಡಳಿತ ಪ್ರದೇಶ ಕಾಶ್ಮೀರದಲ್ಲಿ ಉಗ್ರರರ ವಿರುದ್ಧದ ಕಾರ್ಯಾಚರಣೆ ಇತ್ತೀಚಿಗೆ ತೀರ್ವವಾಗುತ್ತಿದ್ದು, ಸಿಆರ್ಪಿಎಫ್ ಮತ್ತು ಜಮ್ಮು ಕಾಶ್ಮೀರ ಪೊಲೀಸ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಬಂಧಿಸಿದ್ದಾರೆ.
ಕಾಶ್ಮೀರದ ಉತ್ತರ ಭಾಗದಲ್ಲಿರುವ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ನ ವಡೋರಾ ಬಾಲಾ ಪ್ರದೇಶದಲ್ಲಿ ಅಡಗಿ ಕುಳಿತಿದ್ದ ಥಿಯೋಫಿಲ್ ಮಜೀದ್, ಓವೈಸ್ ಅಹ್ಮದ್ ಮಿರ್ ಮತ್ತು ಶಬ್ಬೀರ್ ಅಹ್ಮದ್ ಉಗ್ರರನ್ನು ಭಾರತೀಯ ಸೇನೆ ಹೆಡೆಮುರಿ ಕಟ್ಟಿದೆ. ಈ ಮೂವರೂ ಉಗ್ರರು ಬ್ರೆಟ್ ಕ್ಲಾನ್ ಸೋಪೋರ್ ಪ್ರದೇಶಕ್ಕೆ ಸೇರಿದವರು ಎಂದು ಮೂಲಗಳು ತಿಳಿಸಿವೆ.
ಉಗ್ರರು ಲಷ್ಕರ್ ಎ ತೋಯ್ಬಾ ಸಂಘಟನೆಗೆ ಸೇರಿದವರು ಎಂದು ತಿಳಿದಬಂದಿದೆ. ಕೆಲವು ಶಸ್ತ್ರಗಳನ್ನು ಅವರಿಂದ ವಶಕ್ಕೆ ಪಡೆಯಲಾಗಿದ್ದು, ಈ ಕುರಿತು ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.
ಸೋಮವಾರ ಸಂಜೆಯಷ್ಟೇ ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಕೋರಲ್ ಮಂಜ್ಗಾಮ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಘರ್ಷಣೆ ನಡೆದು, ಇಬ್ಬರು ಉಗ್ರರು ಭದ್ರತಾ ಪಡೆಗಳ ಗುಂಡೇಟಿಗೆ ಹತರಾಗಿದ್ದರು. ಈ ಪ್ರದೇಶದಲ್ಲಿ ಉಗ್ರರು ಮೂವರು ಉಗ್ರರು ಅಡಗಿ ಕುಳಿತಿದ್ದಾರೆ ಎಂದು ಭದ್ರತಾ ಪಡೆಗಳಿಗೆ ಸುಳಿವು ಸಿಕ್ಕಿದ್ದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.








