ವಿಧಾನಸಭೆ ಅಧಿವೇಶನದ ವೇಳೆ ಶಾಸಕರು ಕೇಳಿದ ಪ್ರಶ್ನೆಗಳಿಗೆ ಸಚಿವರು ಸರಿಯಾದ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಸ್ಪೀಕರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆದಿದೆ. ಯು. ಟಿ. ಖಾದರ್ ಈ ವಿಚಾರಕ್ಕೆ ಆಕ್ರೋಶ ವ್ಯಕ್ತಪಡಿಸಿ ಕಲಾಪವನ್ನು ಕೂಡ ಮುಂದೂಡಿದ್ದರು.
ಈ ಬೆಳವಣಿಗೆಯ ಬಳಿಕ ಕಂದಾಯ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಹಾಗೂ ಪಬ್ಲಿಕ್ ವರ್ಕ್ಸ್ ಡಿಪಾರ್ಟ್ಮೆಂಟ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಮೂವರು ಅಧಿಕಾರಿಗಳನ್ನು ತಕ್ಷಣ ಅಮಾನತುಗೊಳಿಸುವಂತೆ ಸಿಎಂ ಸಿದ್ಧರಾಮಯ್ಯ ಸೂಚನೆ ನೀಡಿದ್ದಾರೆ.
ಸ್ಪೀಕರ್ ಸೂಚನೆಯ ಹಿನ್ನೆಲೆಯಲ್ಲಿ PWD, ಪಶು ಸಂಗೋಪನೆ, ಸಾರಿಗೆ, ITBT, DPAR ಹಾಗೂ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಕೂಡ ನೋಟಿಸ್ ನೀಡಲಾಗಿದೆ.
ವಿಧಾನಸಭೆಯಲ್ಲಿ ಶಾಸಕರ ಪ್ರಶ್ನೆಗಳಿಗೆ ಸರಿಯಾದ ಮಾಹಿತಿ ನೀಡದಿರುವುದು ಗಂಭೀರ ವಿಷಯವಾಗಿದ್ದು, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.








