ಮಂಡ್ಯ: ಕೆಆರ್ ಎಸ್ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಮೂವರು ಪ್ರವಾಸಿಗರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಪ್ರವಾಸಿಗರಾದ ಹರೀಶ್, ನಂಜುಂಡ ಹಾಗೂ ಜ್ಯೋತಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಸಾವನ್ನಪ್ಪಿದ ಮೂವರೂ ಮೈಸೂರಿನ ಕಾರುಣ್ಯ ಟ್ರಸ್ಟ್ ಸಿಬ್ಬಂದಿಗಳು ಎನ್ನಲಾಗಿದೆ. ಇಂದು ರಜೆ ಇರುವ ಹಿನ್ನೆಲೆಯಲ್ಲಿ 25 ಜನರು ಪ್ರವಾಸಕ್ಕೆಂದು ಆಗಮಿಸಿದ್ದರು.
ಈ ಸಂದರ್ಭದಲ್ಲಿ ಕೆಆರ್‌ಎಸ್ ಹಿನ್ನೀರಿನಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಮೂವರು ಮುಳುಗಿ ಸಾವನ್ನಪ್ಪಿದ್ದಾರೆ. ಮೂವರ ಪೈಕಿ ಇಬ್ಬರ ಮೃತದೇಹ ಪತ್ತೆಯಾಗದ್ದು, ಮತ್ತೊಬ್ಬರಿಗಾಗಿ ಪೊಲೀಸರು ಹಾಗೂ ಆಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ.