ಮುಂಬಯಿ: ಮೂರು ಅಂತಸ್ತಿನ ಕಟ್ಟಡ ಕುಸಿದ(building collapses) ಪರಿಣಾಮ ಹಲವರು ಕಟ್ಟಡದ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಶನಿವಾರ ಬೆಳಿಗ್ಗೆ ನವಿ ಮುಂಬೈನ (Navi Mumbai) ಶಹಬಾಜ್ ಗ್ರಾಮದಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದೆ. ಪರಿಣಾಮ ಹಲವರು ಸಿಲುಕಿದ್ದಾರೆ ಎನ್ನಲಾಗಿದೆ. ಪೊಲೀಸರು, ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಎಫ್ ತಂಡ ಸ್ಥಳದಲ್ಲಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.
ಈ ಕಟ್ಟಡದಲ್ಲಿ 13 ಫ್ಲಾಟ್ ಗಳಿದ್ದವು. ಸದ್ಯ ಇಬ್ಬರನ್ನು ರಕ್ಷಿಸಲಾಗಿದೆ. ಅಲ್ಲದೇ, ಮತ್ತಿಬ್ಬರು ಸಿಲುಕಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. 10 ವರ್ಷಗಳ ಹಳೆಯ ಕಟ್ಟಡ. ತನಿಖೆ ನಡೆಯುತ್ತಿದೆ. ಕಟ್ಟಡದ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ನವಿ ಮುಂಬೈ ಮಹಾನಗರ ಪಾಲಿಕೆ ಆಯುಕ್ತರು ಹೇಳಿದ್ದಾರೆ.
ಇತ್ತೀಚೆಗಷ್ಟೇ ವಸತಿ ಕಟ್ಟಡದ ಬಾಲ್ಕನಿಯ ಒಂದು ಭಾಗ ಕುಸಿದು ಬಿದ್ದ ನಂತರ 80 ವರ್ಷದ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿತ್ತು. ಇದರ ಬೆನ್ನಲ್ಲಿಯೇ ಮತ್ತೊಂದು ಘಟನೆ ನಡೆದಿದೆ.








