ಜಮ್ಮು: ಮೂರು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಹಲವಾರು ಮಂದಿ ಕಟ್ಟಡದ ಅವಶೇಷಗಳಡಿ ಸಿಲುಕಿಕೊಂಡಿರುವ ಘಟನೆ ಜಮ್ಮುವಿನ ಗೊಲೆಪುಲ್ಲಿ ಪ್ರದೇಶದಲ್ಲಿ ನಡೆದಿದೆ.
ಕಟ್ಟಡದ ನೆಲ ಮಹಡಿಯಲ್ಲಿ ಮರಗಳನ್ನು ಯಂತ್ರಗಳಿಂದ ಕತ್ತರಿಸುವ ಕಾರ್ಖಾನೆಯಿದ್ದು, ಕಾರ್ಖಾನೆಯಲ್ಲಿ ಹಲವು ಮಂದಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಕಟ್ಟಡ ಕುಸಿದು ಬಿದ್ದ ಪರಿಣಾಮ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರು ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ.
ಇನ್ನು ಕಟ್ಟಡ ಕುಸಿದುಬಿದ್ದ ವಿಚಾರ ತಿಳಿದು ಸ್ಥಳಕ್ಕಾಗಮಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿ, ಅವಶೇಷಗಳಿಯಲ್ಲಿ ಸಿಲುಕಿದವರ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಘಟನೆಯಲ್ಲಿ ಅಗ್ನಿಶಾಮಕದ ದಳದ ಸಿಬ್ಬಂದಿ ಕೂಡ ಸಿಲುಕಿಕೊಂಡಿದ್ದಾರೆಂದು ಹೇಳಲಾಗುತ್ತಿದ್ದು. ಇದೀಗ ರಕ್ಷಣಾ ಕಾರ್ಯಾಚರಣೆಯಲ್ಲಿ ಇಬ್ಬರು ಅಧಿಕಾರಿಗಳು ಹಾಗೂ ಕೆಲ ನಾಗರೀಕರನ್ನು ರಕ್ಷಣೆ ಮಾಡಿ, ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ