ಅಫ್ಘಾನಿಸ್ತಾನ ವಿರುದ್ಧ ನಡೆಯಲಿರುವ ಮೂರು ಟಿ20 ಪಂದ್ಯಗಳ ಸರಣಿಗೆ ಬಿಸಿಸಿಐ 16 ಜನ ಸದಸ್ಯರ ತಂಡವನ್ನು ಪ್ರಕಟಿಸಿದೆ.
ಟಿ20 ವಿಶ್ವಕಪ್‌ಗೂ (T20 World Cup 2024) ಮುನ್ನ ಇದು ಭಾರತದ ಕೊನೆಯ ಟಿ20 ಸರಣಿಯಾಗಿದ್ದು, ಅತ್ಯಂತ ಮಹತ್ವ ಪಡೆದಿದೆ. ಈ ಟೂರ್ನಿ ಜ. 11ರಿಂದ 17ರ ವರೆಗೆ ನಡೆಯಲಿದೆ.
ಭಾರತ ಕ್ರಿಕೆಟ್ ತಂಡದ ನಾಯಕ ನಾಯಕ ರೋಹಿತ್ ಶರ್ಮಾ (Rohit Sharma)ಗೆ ನಾಯಕತ್ವ ಸಿಕ್ಕಿದ್ದು, ಕೊಹ್ಲಿಗೆ ಸ್ಥಾನ ಸಿಕ್ಕಿದೆ. ಈ ಮೂಲಕ ಇಬ್ಬರೂ ಆಟಗಾರರು ಬರೋಬ್ಬರಿ 14 ತಿಂಗಳ ನಂತರ ಟಿ20 ತಂಡಕ್ಕೆ ಸೇರಿದ್ದಾರೆ.
ಟಿ20 ಸರಣಿಯಿಂದ ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್ ಮತ್ತು ರುತುರಾಜ್ ಗಾಯಕ್ವಾಡ್ ಹೊರಗುಳಿದಿದ್ದಾರೆ. ಫಿಟ್ ಆಗದ ಕಾರಣ ಅವರನ್ನು ಆಯ್ಕೆ ಮಾಡಿಲ್ಲ. ಹೀಗಾಗಿ ನಾಯಕತ್ವ ರೋಹಿತ್ ಗೆ ಸಿಕ್ಕಿದೆ.
ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಮುಖೇಶ್ ಕುಮಾರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.








