ಲಾರಿಗೆ ಕಾರು ಡಿಕ್ಕಿ | ಮೂವರ ಸಾವು
ತುಮಕೂರು : ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.
ಘಟನೆ ತುಮಕೂರು ತಾಲೂಕಿನ ಕಟ್ಟೀಗೆಹಳ್ಳಿ ಗೇಟ್ ಬಳಿ ನಡೆದಿದೆ. ಬೆಂಗಳೂರು ನಿವಾಸಿಗಳಾದ ಅನ್ನಪೂರ್ಣ (55) ಅದಿತಿ (32) ಮತ್ತು ಆರತಿ ಸಾವನ್ನಪ್ಪಿದ್ದಾರೆ ಎಂದು ಗುರುತಿಸಲಾಗಿದೆ. ಇನ್ನೂ ಘಟನೆಯಲ್ಲಿ ಓರ್ವ ಬಾಲಕನಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಮೂವರು ಮಕ್ಕಳು ಪ್ರಾಣಪಾಯದಿಂದ ಪಾರಾಗಿದ್ದಾರೆ. ಘಟನೆ ಕೊರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಡೆದಿದ್ದೇನು? : ಬೆಂಗಳೂರಿನಿಂದ ಶಿರಾ ಕಡೆ ಹೊರಟಿತ್ತು. ಈ ವೇಳೆ ಕಾರು ಮಾರ್ಗ ಮಧ್ಯೆ, ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಇಬ್ಬರೂ ಸಾವನ್ನಪ್ಪಿದ್ದು, ಒಬ್ಬರು ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ಯವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.
ಇನ್ನೂ ಓರ್ವ ಬಾಲಕನಿಗೆ ಗಂಭೀರವಾಗಿ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರಗೆ ದಾಖಲಿಸಲಾಗಿದೆ.