ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಮಾರತ್ತಹಳ್ಳಿ ರೈಲ್ವೇ ನಿಲ್ದಾಣದ ಹತ್ತಿರ ನಡೆದಿದೆ. ಆಂಧ್ರಪ್ರದೇಶದ ಚಿತ್ತೂರು ಮೂಲದ ಶಶಿಕುಮಾರ್ (23) ಲೋಕೇಶ್ (25) ಹಾಗೂ ಮತ್ತೋರ್ವ ಯುವಕ ಸಾವನ್ನಪ್ಪಿರುವ ದುರ್ದೈವಿಗಳು. ಮೃತದೇಹಗಳನ್ನು ಕಂಡು ಸ್ಥಳೀಯ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ರೈಲ್ವೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಆದರೆ, ಮತ್ತೋರ್ವ ಯುವಕನ ಗುರುತು ಪತ್ತೆಯಾಗಿಲ್ಲ ಎನ್ಲನಾಗಿದೆ. ಮೂವರೂ ಯುವಕರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಈ ಕುರಿತು ತನಿಖೆ ನಡೆಯುತ್ತಿದೆ.