ಮನೆ ಮುಂದೆ ಕಟ್ಟಿ ಹಾಕಿದ್ದ ಹಸುವಿನ ಮೇಲೆ ಹುಲಿ ದಾಳಿ
ಕೊಡಗು: ಕೊಡಗು ಜಿಲ್ಲೆಯಲ್ಲಿ ಕಾಡು ಪ್ರಾಣಿಗಳಾದ, ಹುಲಿ, ಕಾಡಾನೆಗಳ ಹಾವಳಿ ದಿನೇ ದಿನೇ ಹೆಚ್ಚುತ್ತಲೇ ಇದ್ದು, ಗ್ರಾಮಸ್ಥರು ನಿತ್ಯ ಭಯದಲ್ಲಿ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹುಲಿಗಳ ದಾಳಿ ಜಿಲ್ಲೆಯಲ್ಲಿ ಮುಂದುವರೆದಿದೆ. ಇದೀಗ ಕಟ್ಟು ಹಾಕಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ಮಾಡಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಕುಮಟೂರು ಎಂಬಲ್ಲಿ ನಡೆದಿದೆ.
ಅಕ್ಕಿ ಕೊಡ್ತೀನಿ ಅನ್ನೋದೆ ನಿಮ್ಮ ಆಡಳಿತನಾ..?, ಇದನ್ನ ಆಡಳಿತ ಅಂತಾರಾ : ಹೆಚ್ ವಿಶ್ವನಾಥ್ ಕಿಡಿ
ಘಟನೆಯಿಂದಾಗಿ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದ್ದು, ಕಾಡುಪ್ರಾಣಿಗಳ ಹಾವಳಿಗೆ ಬ್ರೇಕ್ ಹಾಕಲು ಸೂಕ್ತ ಕ್ರಮ ಕೈಗೊಳ್ಳುವಂತೆ ಅರಣ್ಯಾಧಿಕಾರಿಗಳಿಗೆ ಒತ್ತಾಯ ಮಾಡಿದ್ದಾರೆ. ರಘು ಎಂಬುವವರ ಮನೆಯ ಸಮೀಪವೇ ಕಟ್ಟಿದ್ದ ಹಸುವಿನ ಮೇಲೆ ಹುಲಿ ದಾಳಿ ಮಾಡಿದ್ದು, ಕತ್ತಿನ ಭಾಗದಲ್ಲಿ ಗಂಭೀರ ಗಾಯಗೊಳಿಸಿದೆ. ಇನ್ನು ಬಲ್ಯಮಂಡೂರು ಭಾಗದಲ್ಲಿ ಸಹ ಹುಲಿ ಅಲೆದಾಟ ನಡೆಸಿದ್ದು, ಅಲ್ಲಲ್ಲಿ ಹೆಜ್ಜೆ ಗುರುತುಗಳು ಕಂಡು ಬಂದಿದ್ದು, ಗ್ರಾಮಸ್ಥರ ನಿದ್ದೆಗೆಡಿಸಿದೆ. ಹುಲಿ ಸೆರೆಹಿಡಿಯಲು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಇನ್ನೂ ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.