ಹುಲಿ ಉಗುರಿನ ಕುರಿತು ಇತ್ತೀಚೆಗೆ ದೊಡ್ಡ ಸದ್ದು ಮಾಡುತ್ತಿದೆ. ಈಗಾಗಲೇ ಹುಲಿ ಉಗುರಿನ ಪೆಂಡೆಂಟ್ ಹಾಕಿದ್ದರು ಎಂಬ ಕಾರಣಕ್ಕೆ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಇತ್ತೀಚೆಗಷ್ಟೇ ಬಂಧನವಾಗಿದ್ದಾರೆ. ಜೈಲಿಗೂ ಹೋಗಿದ್ದಾರೆ. ಇದರ ಬೆನ್ನಲ್ಲಿಯೇ ಈಗ ಹಲವರಿಗೆ ಸಂಕಷ್ಟ ಶುರುವಾಗಿದೆ.
ದೇವಸ್ಥಾನವೊಂದರಲ್ಲಿ ದರ್ಶನ್ (Darshan) ಅವರ ಫೋಟೋದಲ್ಲಿ ಹುಲಿ ಉಗುರು ಧರಿಸಿದ್ದಾರೆ. ಅಲ್ಲದೇ, ನಿಖಿಲ್ (Nikhil) ಮದುವೆ ಸಂದರ್ಭದಲ್ಲಿ ಹುಲಿ ಉಗುರಿನ ಪೆಂಡೆಂಟ್ ಹಾಕಿಕೊಂಡಿದ್ದಾರೆ. ನಟ ಜಗ್ಗೇಶ್ (Jaggesh) ಸಂದರ್ಶನವೊಂದರಲ್ಲಿ ಹುಲಿ ಉಗುರಿನ ಪೆಂಡೆಂಟ್ ತೋರಿಸುತ್ತಾ, ‘ಇದನ್ನು ನನ್ನ ತಾಯಿ ಕೊಟ್ಟಿದ್ದಾರೆ. ಮಗ ಹುಲಿಯಂತೆ ಇರಲಿ’ ಎನ್ನುವ ಮಾತುಗಳನ್ನು ಹೇಳಿದ್ದಾರೆ. ಹೀಗಾಗಿ ಇವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಹಲವರು ಆಗ್ರಹಿಸುತ್ತಿದ್ದಾರೆ.
ವಿನಯ್ ಗುರೂಜಿ ಹುಲಿ ಚರ್ಮದ ಮೇಲೆ ಕೂತಿರುವ ಮತ್ತು ಅರ್ಚಕರೊಬ್ಬರು ಹುಲಿ ಉಗುರಿನ ಸರ ಹಾಕಿರುವ ಕುರಿತಾಗಿಯೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ನೋಟಿಸ್ ಕೊಡುವುದಾಗಿ ಉನ್ನತ ಮಟ್ಟದ ಅಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗುತ್ತಿದೆ.