ಬಿಗ್ ಬಾಸ್ (Big Boss)ನ ಮಾಜಿ ಸ್ಪರ್ಧಿ ಆರ್ಯವರ್ಧನ್ ಗುರೂಜಿ (Aryavardhan Guruji) ಕೊರಳಿನಲ್ಲಿಯೂ ಹುಲಿ ಉಗುರು (Tiger claw) ಪೆಂಡೆಂಟ್ ಧರಿಸಿದ್ದರು ಎಂಬ ಕಾರಣಕ್ಕೆ ಅವರ ಕಚೇರಿಯ ಮೇಲೆ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ.
ಅಲ್ಲದೇ, ನೋಟಿಸ್ ನೀಡಿದ್ದು, ಹುಲಿ ಉಗುರು ವಶ ಪಡಿಸಿಕೊಳ್ಳಲಾಗಿದೆ. ಬಿಗ್ ಬಾಸ್ ಮನೆಯಲ್ಲಿಯೇ ವರ್ತೂರ್ ಸಂತೋಷ್ ಬಂಧನವಾಗಿದ್ದರು. ಈ ಬೆನ್ನಲ್ಲಿಯೇ ಹಲವು ದಾಳಿಗಳು ಕೂಡ ನಡೆದಿವೆ. ಆರ್ಯವರ್ಧನ್ ಕೂಡ ಬಿಗ್ ಬಾಸ್ ನಲ್ಲಿಯೇ ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು. ಈಗ ಅದನ್ನು ಪತ್ತೆ ಹಚ್ಚಲಾಗಿದೆ.
ಚಿನ್ನದ ಪೆಂಡೆಂಟ್ ಆಗಿರುವ ಕಾರಣದಿಂದಾಗಿ ಅರಣ್ಯಾಧಿಕಾರಿಗಳು ಅದನ್ನು ಚಿನ್ನದಂಗಡಿಗೆ ತೆಗೆದುಕೊಂಡು ಹೋಗಿದ್ದಾರೆ. ಇದು ಮೂರು ಲಕ್ಷ ರೂಪಾಯಿ ಬೆಲೆ ಬಾಳುವ ಚಿನ್ನವಾಗಿದೆ ಎನ್ನಲಾಗುತ್ತಿದೆ.