ನಾನು ಸತ್ತಿಲ್ಲ, ಇನ್ನೂ ಬದುಕಿದ್ದೇನೆ’ ಎಂದು ಸಮಾಜವಾದಿ ಪಕ್ಷದ ಮಾಜಿ ನಾಯಕ, ರಾಜ್ಯಸಭೆಯ ಸದಸ್ಯ ಅಮರ್ ಸಿಂಗ್ ತಮ್ಮ ವಿಡಿಯೋದಲ್ಲಿ ಹೇಳಿಕೊಂಡಿದ್ದು, ಅದನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. ಕೆಲವರು ನಾನು ಯಮರಾಜನ ಬಳಿ ಹೋಗಿದ್ದೇನೆಂದು ಸುದ್ದಿ ಹಬ್ಬಿಸುತ್ತಿದ್ದಾರೆ. ಅದೆಲ್ಲಾ ಸುಳ್ಳು. ನನ್ನಲ್ಲಿ ಇನ್ನೂ ಧೈರ್ಯ, ಉತ್ಸಾಹಗಳಿವೆ. ನನ್ನ ಚಿಕಿತ್ಸೆ ಮುಗಿದ ನಂತರ ಭವಾನಿದೇವಿಯ ಆಶೀರ್ವಾದದಿಂದ ಡಬಲ್ ಉತ್ಸಾಹದಲ್ಲಿ ವಾಪಸ್ ಬರುತ್ತೇನೆ ಎಂದು ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.
64 ವರ್ಷದ ಅಮರ್ ಸಿಂಗ್ ಅವರು ಮೃತಪಟ್ಟಿದ್ದಾರೆ ಎಂಬ ಸುದ್ದಿ ಹಬ್ಬಿದ ಹಿನ್ನೆಲೆಯಲ್ಲಿ ಮರು ದಿನ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ‘ಟೈಗರ್ ಜಿಂದಾ ಹೈ’ ಎಂಬ ಶೀರ್ಷಿಕೆಯಡಿಯಲ್ಲಿ ಅವರು ಮಾತನಾಡಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ನನ್ನ ಹಿತೈಷಿಗಳಿಗೆ ಮತ್ತು ನನ್ನ ಸಾವಿಗೆ ಕಾದುಕುಳಿತವರಿಗೆ ತಿಳಿಸುವುದೇನೆಂದರೆ ನಾನು ಸಿಂಗಾಪುರದಲ್ಲಿದ್ದು, ಕಿಡ್ನಿ ಸಮಸ್ಯೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಶೀಘ್ರವೇ ಶಸ್ತ್ರ ಚಿಕಿತ್ಸೆ ನಡೆಯಲಿದ್ದು, ಚಿಕಿತ್ಸೆಯ ರಿವಾಜುಗಳನ್ನೆಲ್ಲ ಮುಗಿಸಿ ಆದಷ್ಟು ಬೇಗ ಭಾರತಕ್ಕೆ ವಾಪಸ್ ಆಗುತ್ತೇನೆ ಎಂದು ವಿಡಿಯೋದಲ್ಲಿ ಹೇಳಿರುವ ಅಮರ್ ಸಿಂಗ್ ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿರುವ ಸುದ್ದಿ ಸುಳ್ಳು ಎಂದು ಸ್ಪಷ್ಟನೆ ನೀಡಿದ್ದಾರೆ.
ಬಿಜೆಪಿಯಲ್ಲಿ ಬಿರುಕು: ಅತೃಪ್ತ ನಾಯಕರ ‘ಬಣ’ ಕದನ
ಕರ್ನಾಟಕದ ಬಿಜೆಪಿ ಘಟಕದಲ್ಲಿ ಬಣ ರಾಜಕೀಯ ಮತ್ತೆ ಮುಂದುವರೆದಿದೆ. ಪಕ್ಷದೊಳಗಿನ ಅತೃಪ್ತ ನಾಯಕರು ಮಾಜಿ ಸಚಿವ ಕುಮಾರ್ ಬಂಗಾರಪ್ಪನವರ ನಿವಾಸದಲ್ಲಿ ಸಭೆ ಸೇರಿದ್ದು, ಈ ಸಭೆ ಹಲವು...