ಲಖನೌ : ಕೊರೊನಾ ವೈರಸ್ ಹಾವಳಿಯ ಕಾರಣ ಜೂನ್ 30 ರವರೆಗೆ ರಾಜ್ಯದಲ್ಲಿ ಯಾವುದೇ ಸಾರ್ವಜನಿಕ ಸಮಾರಂಭ, ಸಮಾವೇಶಗಳಿಗೆ ಅವಕಾಶ ನೀಡಬಾರದು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಅಲ್ಲದೆ “ಪರಿಸ್ಥಿತಿಗೆ ಅನುಗುಣವಾಗಿ ಹೆಚ್ಚಿನ ನಿರ್ಧಾರ ತೆಗೆದುಕೊಳ್ಳಲಾಗುವುದು” ಸಿಎಂ ಯೋಗಿ ಆದಿತ್ಯನಾಥ್ ಕಚೇರಿ ಟ್ವೀಟ್ ಮಾಡಿದೆ.
ಇಂದು ಕೋವಿಡ್ -19 ಪರಿಸ್ಥಿತಿ ಕುರಿತು ಸಿಎಂ ಆದಿತ್ಯನಾಥ್ ರಾಜ್ಯದ 11 ಸಮಿತಿಗಳ ಅಧ್ಯಕ್ಷರೊಂದಿಗೆ ಸಭೆ ನಡೆಸಿದ ಬಳಿಕ ಈ ತೀರ್ಮಾನ ತೆಗೆದುಕೊಂಡಿದ್ದಾರೆ.
ಇನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಕಾರ, ಉತ್ತರ ಪ್ರದೇಶದಲ್ಲಿ 1,621 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, ಇದುವರೆಗೆ 247 ರೋಗಿಗಳು ಗುಣಮುಖವಾಗಿದ್ದಾರೆ.ಒಟ್ಟಾರೆ 25 ಮಂದಿ ಸೋಂಕುನಿಂದ ಸಾವನ್ನಪ್ಪಿದ್ದಾರೆ.








