ಸರಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ : ಸಿಎಂ ಬೊಮ್ಮಾಯಿ
ಬೆಂಗಳೂರು: ರಾಜ್ಯ ಸರಕಾರವು. ಸರಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದೆ. ಸರಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ ಮಾಡಲು ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಲು ನಿರ್ಧರಿಸಿದೆ. ಈ ಬಗ್ಗೆ ಬೊಮ್ಮಾಯಿ ಮೌಖಿಕವಾಗಿ ಘೋಷಣೆ ಮಾಡಿದ್ದು, ಸರ್ಕಾರದಿಂದ ಅಧಿಕೃತ ಆದೇಶಯೊಂದೇ ಬಾಕಿ ಇದೆ.
ಇನ್ನು ಈ ಬಗ್ಗೆ ಟ್ವೀಟ್ ಮಾಡಿರುದ ಸಿಎಂ ಬೊಮ್ಮಾಯಿ, ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸರ್ಕಾರ 1447 ಕೋಟಿ ರೂ. ವಾರ್ಷಿಕ ವೆಚ್ಚ ಭರಿಸಲಿದೆ. ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
https://twitter.com/CMofKarnataka/status/1511227754557042690?ref_src=twsrc%5Etfw%7Ctwcamp%5Etweetembed%7Ctwterm%5E1511227754557042690%7Ctwgr%5E%7Ctwcon%5Es1_&ref_url=https%3A%2F%2Fstatic.asianetnews.com%2Ftwitter-iframe%2Fshow.html%3Furl%3Dhttps%3A%2F%2Ftwitter.com%2FCMofKarnataka%2Fstatus%2F1511227754557042690%3Fref_src%3Dtwsrc5Etfw
ಕೇಂದ್ರ ಸರ್ಕಾರಿ ನೌಕರು ಪಡೆಯುತ್ತಿರುವ ವೇತನಕ್ಕೆ ಸಮನಾಗಿ ಕರ್ನಾಟಕ ಸರ್ಕಾರಿ ನೌಕರರ ವೇತನ ಪರಿಷ್ಕಸಬೇಕೆಂಬ ಬಹುಕಾಲದ ಬೇಡಿಕೆ ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ ಸ್ಪಂದಿಸಿದ್ದು, 7ನೇ ವೇತನ ಆಯೋಗ ರಚಿಸುವುದಾಗಿ ಘೋಷಣೆ ಮಾಡಿದ್ದಾರೆ.
ಹೌದು ಆಯೋಗ ರಚಿಸುವ ವಿಚಾರವನ್ನ ಇತ್ತೀಚೆಗೆ ವಿಧಾನಸಭೆಯಲ್ಲಿ ಸಿಎಂ ತಿಳಿಸಿದ್ದು, ಆದಷ್ಟು ಬೇಗ ಆಯೋಗ ರಚಿಸುತ್ತೇನೆ. ಅದು ನೀಡುವ ವರದಿ ಆಧರಿಸಿ ನೌಕರರ ವೇತನ ರಿಷ್ಕರಣೆ ಮಾಡುಲಾಗುವುದು ಎಂದು ಭರವಸೆ ನೀಡಿದ್ದಾರೆ.
ನಾನು ಬಜೆಟ್ನಲ್ಲಿ ಯಾವುದೇ ಘೋಷಣೆ ಮಾಡದ ಕಾರಣ, ಸಂಘದ ಪದಾಧಿಕಾರಿಗಳು ನನ್ನನ್ನು ಭೇಟಿ ಮಾಡಿ ಬೇಡಿಕೆಯನ್ನು ಮುಂದಿಟ್ಟಿದ್ದರು. ಹಾಗಾಗಿ, ಆದಷ್ಟು ಬೇಗ ಆಯೋಗವನ್ನು ರಚಿಸಲು ನಿರ್ಧರಿಸಲಾಗಿದೆ. ಆಯೋಗ ಇತರ ರಾಜ್ಯಗಳ ನೌಕರರ ವೇತನವನ್ನು ಅಧ್ಯಯನ ಮಾಡಿ ಶಿಫಾರಸುಗಳನ್ನು ಮಾಡಲಿದೆ ಎಂದು ವಿಧಾನಸಭೆಯಲ್ಲಿ ಬಜೆಟ್ ಚರ್ಚೆ ವೇಳೆ ಬೊಮ್ಮಾಯಿಯವರು ತಿಳಿಸಿದರು.








