Tipu Sultan | ಟಿಪ್ಪು ಕೇವಲ ಮತಾಂಧನಷ್ಟೇ ಅಲ್ಲ, ಕನ್ನಡ ದ್ವೇಷಿ ಕೂಡ
ಬೆಂಗಳೂರು : ಟಿಪ್ಪು ಕೇವಲ ಮತಾಂಧನಷ್ಟೇ ಅಲ್ಲ, ಬದಲಾಗಿ ಕನ್ನಡ ದ್ವೇಷಿ ಕೂಡ ಎಂದು ವಿಪಕ್ಷ ಸಿದ್ದರಾಮಯ್ಯಗೆ ರಾಜ್ಯ ಬಿಜೆಪಿ ಘಟಕ ತಿರುಗೇಟು ನೀಡಿದೆ.
ಟಿಪ್ಪು ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಟ್ವಿಟ್ಟರ್ ನಲ್ಲಿ ಬಿಜೆಪಿ ಕಿಡಿಕಾರಿದ್ದು, ಟಿಪ್ಪು ಸುಲ್ತಾನ್ ಮತಾಂಧನಲ್ಲ ಎನ್ನುವ “ಜಾಣಕುರುಡುತನ ಮತ್ತು ಜಾಣಕಿವುಡುತನ” ಕಾಂಗ್ರೆಸ್ ನಾಯಕರನ್ನು ಆವರಿಸಿಕೊಂಡಿದೆ.
ಟಿಪ್ಪು ಸುಲ್ತಾನ್ ಮತಾಂಧನಲ್ಲ ಎನ್ನುವ "ಜಾಣಕುರುಡುತನ ಮತ್ತು ಜಾಣಕಿವುಡುತನ" ಕಾಂಗ್ರೆಸ್ ನಾಯಕರನ್ನು ಆವರಿಸಿಕೊಂಡಿದೆ.
ಕೊಡಗಿನ ನರಮೇಧ, ಮೇಲುಕೋಟೆಯ ಮಂಡ್ಯ ಅಯ್ಯಂಗಾರರ ಹತ್ಯೆ, ನೆತ್ತರಕೆರೆಯ ಹತ್ಯಾಕಾಂಡ, ಮೈಸೂರು ಒಡೆಯರ ಮೇಲಿನ ದಾಳಿ, ದುರ್ಗದ ಪಾಳೆಯಗಾರರ ಮೇಲಿನ ದಾಳಿ – ಇವೆಲ್ಲ ಯಾವುದರ ಸಂಕೇತ?#ಟಿಪ್ಪುಕಾಂಗ್ರೆಸ್
— BJP Karnataka (@BJP4Karnataka) May 23, 2022
ಕೊಡಗಿನ ನರಮೇಧ, ಮೇಲುಕೋಟೆಯ ಮಂಡ್ಯ ಅಯ್ಯಂಗಾರರ ಹತ್ಯೆ, ನೆತ್ತರಕೆರೆಯ ಹತ್ಯಾಕಾಂಡ, ಮೈಸೂರು ಒಡೆಯರ ಮೇಲಿನ ದಾಳಿ, ದುರ್ಗದ ಪಾಳೆಯಗಾರರ ಮೇಲಿನ ದಾಳಿ – ಇವೆಲ್ಲ ಯಾವುದರ ಸಂಕೇತ ಎಂದು ಪ್ರಶ್ನೆ ಮಾಡಿದೆ.
ಟಿಪ್ಪು ಕೇವಲ ಮತಾಂಧನಷ್ಟೇ ಅಲ್ಲ, ಬದಲಾಗಿ ಕನ್ನಡ ದ್ವೇಷಿ ಕೂಡ. ಕನ್ನಡ ಅಸ್ಮಿತೆಯ ಬಗ್ಗೆ ಮಾತನಾಡುವ ಮುನ್ನ ಸಿದ್ದರಾಮಯ್ಯ ತಮ್ಮ ಇಬ್ಬಂದಿತನಕ್ಕೆ ಔಷಧಿ ಕಂಡುಕೊಳ್ಳಲಿ.
ಕಂದಾಯ ದಾಖಲೆಗಳಿಂದಲೂ ಕನ್ನಡ ಅಳಿಸಿ ಪರ್ಷಿಯನ್ ಜಾರಿಗೊಳಿಸಿದ ಜಿಹಾದಿ ಮನಸ್ಥಿತಿಯ ಟಿಪ್ಪುವಿನ ಬಗ್ಗೆ ಕಾಂಗ್ರೆಸ್ಸಿಗರಿಗೆ ಯಾಕಿಷ್ಟು ಪ್ರೀತಿ ಎಂದು ಕುಟುಕಿದೆ. tipu-sultan- is not only a fanatic but also a Kannada hater