Tipu | ಟಿಪ್ಪುವಿಗೆ ‘ಮೈಸೂರ ಹುಲಿ’ ಎಂದು ಬಿರುದು ಕೊಟ್ಟದ್ದು ಬ್ರಿಟಿಷರು
ಬೆಂಗಳೂರು : ಟಿಪ್ಪುವಿಗೆ ‘ಮೈಸೂರ ಹುಲಿ‘ ಎಂದು ಬಿರುದು ಕೊಟ್ಟದ್ದು ಬ್ರಿಟಿಷರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬುಧವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಡಿ.ಕೆ.ಶಿವಕುಮಾರ್, ರಾಷ್ಟ್ರಪತಿಗಳು ರಾಜ್ಯಕ್ಕೆ ಬಂದಾಗ ನಮಗೆ ಟಿಪ್ಪು ಬಗ್ಗೆ ಏನು ಪಾಠ ಮಾಡಬೇಕೋ ಅದನ್ನು ಮಾಡಿದ್ದಾರೆ.
ಅಬ್ದುಲ್ ಕಲಾಂ ಅವರು ಸಹ ಟಿಪ್ಪು ಬಗ್ಗೆ ಹೇಳಿದ್ದಾರೆ. ಬಿಜೆಪಿಯವರು ಮೊದಲು ಅದನ್ನು ನೋಡಲಿ.
ಟಿಪ್ಪುವಿಗೆ ‘ಮೈಸೂರ ಹುಲಿ‘ ಎಂದು ಬಿರುದು ಕೊಟ್ಟದ್ದು ಬ್ರಿಟಿಷರು. ನಾನಲ್ಲ, ಕಾಂಗ್ರೆಸ್‌ನವರಲ್ಲ, ಬಿಜೆಪಿಯವರೂ ಅಲ್ಲ ಎಂದಿದ್ದಾರೆ.
ಇನ್ನು ಡಿ.ಕೆ.ಶಿವಕುಮಾರ್ ಈ ಹೇಳಿಕೆ ಸರಣಿ ಟ್ವಿಟ್ ಗಳ ಮೂಲಕ ಬಿಜೆಪಿ ಟಾಂಗ್ ನೀಡಿದೆ.
ಟಿಪ್ಪು ಸುಲ್ತಾನ್ ಈ ದೇಶದ ಸ್ವಾತಂತ್ರ್ಯ ಯೋಧ ಎನ್ನುವುದೇ ಒಂದು ಉತ್ರ್ಪೇಕ್ಷೆ ಹಾಗೂ ತಿರುಚಿದ ಸತ್ಯ.
ಶಾಲಾ– ಪಠ್ಯ ಕ್ರಮದಲ್ಲಿ ಇಂಥ ಸುಳ್ಳುಗಳೇಕೆ ಇರಬೇಕು? ವಿದ್ಯಾರ್ಥಿಗಳಿಗೆ ಮತಾಂಧರ ತಿರುಚಿದ ಇತಿಹಾಸ ಕಲಿಸುವುದು ಎಷ್ಟು ಸರಿ?
ನೆತ್ತರಕೆರೆ, ಮಡಿಕೇರಿಯಲ್ಲಿ ಟಿಪ್ಪು ನಡೆಸಿದ ನರಮೇಧ ಮರೆಯಲು ಸಾಧ್ಯವೇ? ಮತಾಂತರವಾಗು, ಶರಣಾಗು, ಇಲ್ಲವೇ ಪ್ರಾಣತ್ಯಾಗ ಮಾಡು ಎಂಬುದು ಟಿಪ್ಪು ರಾಜನೀತಿ.
ಒಂದೇ ಒಂದು ಯುದ್ಧವನ್ನು ನೇರಮಾರ್ಗದಲ್ಲಿ ಗೆಲ್ಲದ ಮತಾಂಧನಿಗೆ “ಮೈಸೂರು ಹುಲಿ” ಎಂಬ ಬಿರುದು ಪ್ರಾಪ್ತವಾಗಿದ್ದೇ ಒಂದು ಚೋದ್ಯ. ನೈಜತೆ ಬಯಲಾಗಲೇಬೇಕಲ್ಲವೇ ಎಂದು ಪ್ರಶ್ನಿಸಿದೆ.