ರಾಯಚೂರು: ಟೈರ್ ಸ್ಫೋಟಗೊಂಡು ವಾಹನ ಪಲ್ಟಿಯಾದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಸಿಂಧನೂರು (Sindhanur) ತಾಲೂಕಿನ ಅರಗಿನಮರ ಕ್ಯಾಂಪ್ ಹತ್ತಿರ ಈ ಘಟನೆ ನಡೆದಿದೆ. ಕ್ರೂಸರ್ ಚಾಲಕ ಶಿವ (24), ಮಂತ್ರಾಲಯದ (Mantralaya) ಸಂಸ್ಕೃತ ಪಾಠ ಶಾಲೆಯ ವಿದ್ಯಾರ್ಥಿಗಳಾದ ಅಯ್ಯವಂದನ್ (18), ಸುಜೇಂದ್ರ (22) ಹಾಗೂ ಅಭಿಲಾಷ್(20) ಸಾವನ್ನಪ್ಪಿರುವ ದುರ್ದೈವಿಗಳು.
10 ಜನರಿಗೆ ಗಂಭೀರ ಗಾಯವಾಗಿದ್ದು, ಸಿಂಧನೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.