ಚಿತ್ರದುರ್ಗ: ಕಾರಿನ ಟೈರ್ ಸ್ಪೋಟಗೊಂಡ ಪರಿಣಾಮ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಚಿತ್ರದುರ್ಗ(Chitradurga) ತಾಲೂಕಿನ ಕಾತ್ರಾಳ್ ಕೆರೆ ಹತ್ತಿರ ನಡೆದಿದೆ. ಟೈರ್ ಸ್ಫೋಟವಾಗುತ್ತಿದ್ದಂತೆ ಕಾರು ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರೂ ಸ್ಥಳದಲ್ಲಿಯೇ ಬಲಿಯಾಗಿದ್ದಾರೆ. ಮುತ್ತುಸ್ವಾಮಿ(69) ಹಾಗೂ ಪಾಂಡುರಂಗ(32) ಸಾವನ್ನಪ್ಪಿದ ದುರ್ದೈವಿಗಳು. ಅಲ್ಲದೇ, ಘಟನೆಯಲ್ಲಿ ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಾರಿನಲ್ಲಿ ಹೊರಟವರು ದಾವಣಗೆರೆಯಿಂದ ಬೆಂಗಳೂರಿಗೆ ಹೋಗುತ್ತಿದ್ದರು ಎನ್ನಲಾಗಿದೆ. ಈ ಕುರಿತು ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.