ದಾವಣಗೆರೆ: ಟೆಂಪೋ ವಾಹನದ ಟೈಯರ್ ಸ್ಫೋಟಗೊಂಡ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ನಗರದಲ್ಲಿ ನಡೆದಿದ್ದು, ವಾಹನದಲ್ಲಿದ್ದ 6 ಜನರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸ್ಥಳೀಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಓರ್ವ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದ್ದು, ಹುಬ್ಬಳ್ಳಿ ಕಿಮ್ಸ್ ಗೆ ದಾಖಲಿಸಲಾಗಿದೆ.
ವಾಹನದಲ್ಲಿದ್ದವರು ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯಂ ತಾಲೂಕಿನ ಸಿಂಗರಾಜನಹಳ್ಳಿ ಗ್ರಾಮದ ನಿವಾಸಿಗಳು ಎನ್ನಲಾಗಿದೆ.
ಹಾವೇರಿ ಜಿಲ್ಲೆಯ ಬ್ಯಾಡಗಿಯಿಂದ ಮೆಣಸಿನಕಾಯಿ ತೆಗೆದುಕೊಂಡು ತಮ್ಮೂರಿಗೆ ಮರಳಿ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.