ಬೆಂಗಳೂರು : ಕಾರಿನ ಟೈರ್ ಸ್ಫೋಟಗೊಂಡ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಉತ್ತರ ತಾಲೂಕಿನ ಅಂಚೆಪಾಳ್ಯ ಹತ್ತಿರ ನಡೆದಿದೆ.
ಚಲಿಸುತ್ತಿದ್ದ ಕಾರಿನ (Car) ಟೈಯರ್ ಸ್ಫೋಟಗೊಂಡಿದೆ. ಕಾರು ತುಮಕೂರು ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ವೇಗವಾಗಿ ಬಂದ ಕಾರಿನ ಚಕ್ರ ಬ್ಲಾಸ್ಟ್ ಆದ ಪರಿಣಾಮ ಈ ಘಟನೆ ನಡೆದಿದ್ದು, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಅಗಸ್ಟಿನ್, ದಾರಾರೆಡ್ಡಿ ಸಾವನ್ನಪ್ಪಿದ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಆದರೆ, ಮತ್ತೋರ್ವ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.
ಅಲ್ಲದೇ, ಇಬ್ಬರ ಸ್ಥಿತಿ ಗಂಭೀರವಾಗಿದೆ. ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅವಘಡ ಸಂಭವಿಸಿದ್ದು, ನೆಲಮಂಗಲ (Nelamangala) ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.