ಬಾಗಲಕೋಟೆ: ಮೇಲಿನ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಮನನೊಂದು ನೌಕರರೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಸಾರಿಗೆ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಚಾಲಕ ಕಂ ನಿರ್ವಾಹಕ ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ (Suicide Attempt)ದ್ದಾರೆ ಎನ್ನಲಾಗಿದೆ. ಇವರು ಬೀಳಗಿ ಡೀಪೋದಲ್ಲಿ ಕೆಲಸ ಮಾಡುತ್ತಿದ್ದರು. ಆದರೆ, ಮೇಲಾಧಿಕಾರಿಗಳು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ.
ಮಲ್ಲು ಜ್ಯೋತಿಖಾನ್ (41) ಆತ್ಮಹತ್ಯೆಗೆ ಯತ್ನಿಸಿರುವ ಕಾರ್ಮಿಕ. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಇವರು ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.