ಹುಬ್ಬಳ್ಳಿ: ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತ ಪತ್ನಿ ಹಾಗೂ ಮಕ್ಕಳು ಸೇರಿಕೊಂಡು ಮಹಿಳೆ (Woman)ಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಈ ಘಟನೆ ನಗರದ ವಿದ್ಯಾನಗರದಲ್ಲಿ ನಡೆದಿದೆ. ಹಲ್ಲೆಗೆ ಒಳಗಾದ ಮಹಿಳೆ ವ್ಯಕ್ತಿಯೊಬ್ಬನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು ಎನ್ನಲಾಗಿದೆ. ಹೀಗಾಗಿ ವ್ಯಕ್ತಿಗೆ ಈ ಮಹಿಳೆ ಮಾನಸಿಕ ಹಿಂಸೆ ನೀಡುತ್ತಿದ್ದಳು ಎಂಬ ಆರೋಪ ಕೇಳಿ ಬಂದಿದೆ. ಇದಕ್ಕಾಗಿ ಬೇಸತ್ತ ಕುಟುಂಬಸ್ಥರು ಆ ಮಹಿಳೆ ಮಾಡುತ್ತಿದ್ದ ಕೆಲಸದ ಸ್ಥಳಕ್ಕೆ ತೆರಳಿ ಇಟ್ಟಿಗೆ ಹಾಗೂ ಇನ್ನಿತರ ವಸ್ತುಗಳಿಂದ ಹಲ್ಲೆ ನಡೆಸಿದ್ದಾರೆ.
ಈ ವೇಳೆ ಗಲಾಟೆ ಬಿಡಿಸಲು ಬಂದ ಮಹಿಳೆಯ ಅಕ್ಕನ ಮೇಲೆ ಕೂಡ ಹಲ್ಲೆ ನಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ತೆರಳಿ, ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಈ ಕುರಿತು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.