Tirupathi : ತಿರುಪತಿ ಸನ್ನಿಧಾನದಲ್ಲಿ ಕೇವಲ ಹುಂಡಿಯಿಂದಲೇ 1,450.50 ಕೋಟಿ. ರೂ ಆದಾಯ
ವಿಶ್ವ ವಿಖ್ಯಾತ ತಿರುಪತಿ ತಿಮ್ಮಪ್ಪನ ಸನ್ನಿಧಾನದಲ್ಲಿ ಕೇವಲ ಹುಂಡಿಯಿಂದಲೇ 1,450.50 ಕೋಟಿ ರೂ.ಆದಾಯ ಸಂಗ್ರಹವಾಗಿದೆ..
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ತಿರುಮಲ ತಿರುಪತಿ ದೇವಸ್ಥಾನ ಕಾರ್ಯನಿರ್ವಾಹಕ ಅಧಿಕಾರಿ ಧರ್ಮಾ ರೆಡ್ಡಿ, 2022ರಲ್ಲಿ ದೇವಸ್ಥಾನಕ್ಕೆ 2.37 ಕೋಟಿ ಭಕ್ತರು ಭೇಟಿ ನೀಡಿದ್ದು, ಹುಂಡಿ ಸಂಗ್ರಹವು 1,450.50 ಕೋಟಿ ರೂ. ಆಗಿದೆ ಎಂದು ತಿಳಿಸಿದ್ದಾರೆ.
2021 ರಲ್ಲಿ 1.04 ಕೋಟಿ ಭಕ್ತರು ಭೇಟಿ ನೀಡಿ 833.41 ಕೋಟಿ ರೂ. ಹುಂಡಿ ಸಂಗ್ರಹವಾಗಿತ್ತು. 2021 ಮತ್ತು 2022ರ ಆರಂಭದಲ್ಲಿ ಕೋವಿಡ್ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ಇಳಿಕೆಯಾಗಿತ್ತು.