ಆಂಧ್ರಪ್ರದೇಶ : ದೇಶದಲ್ಲಿ ಲಾಕ್ ಡೌನ್ ಸಡಿಲಿಕೆಯಾಗ್ತಿರುವ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ದೇಗುಲ ಮತ್ತೆ ತೆರೆಯಲು ಸಿದ್ಧವಾಗುತ್ತಿದೆ. ಆದರೆ, ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಅನುಸರಿಸಲು ಟಿಟಿಡಿ ಮುಂದಾಗಿದೆ. ಒಂದು ಮೀಟರ್ ಅಂತರವನ್ನು ಭಕ್ತರು ಕಾಪಾಡಿಕೊಳ್ಳುವಂತೆ ನಿಯಮ ತರಲಾಗುತ್ತಿದೆ. ಅಲ್ಲದೇ ಮಾಸ್ಕ್ ಗಳನ್ನು ಕಡ್ಡಾಯಗೊಳಿಸಲು ಚಿಂತಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಟಿಟಿಡಿಯ ಅಧ್ಯಕ್ಷ ವೈ. ವಿ. ಸುಬ್ಬಾರೆಡ್ಡಿ, ಮುಂದಿನ ಆದೇಶದ ಬಳಿಕ ಭಕ್ತರಿಗೆ ದೇಗುಲದಲ್ಲಿ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ. ಇದರ ಮಧ್ಯೆ 1,440 ಹೊರಗುತ್ತಿಗೆ ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕುವ ನಿರ್ಣಯಕ್ಕೆ ಬಂದಿದ್ದ ಟಿಟಿಡಿ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ತನ್ನ ನಿರ್ಧಾರವನ್ನು ಹಿಂತೆಗೆದುಕೊಂಡಿದೆ.