Tirupati : ತಿರುಪತಿ ತಿರುಮಲ ದೇವಸ್ಥಾನದ ಗರ್ಭಗುಡಿ 8 ತಿಂಗಳು ಬಂದ್..!!
ತಿರುಪತಿ : ವಿಶ್ವ ಪ್ರಸಿದ್ಧ ತಿರುಪತಿ ತಿರುಮಲ ದೇವಾಲಯದ ಗರ್ಭಗುಡಿಯ ಬಾಗಿಲು ಸುಮಾರು 8 ತಿಂಗಳುಗಳ ಕಾಲ ಬಂದ್ ಆಗಲಿದೆ ಎನ್ನಲಾಗುತ್ತಿದೆ..
ಹೌದು..!
ತಿರುಮಲದ ಮುಖ್ಯ ಗರ್ಭಗುಡಿ ಮೇಲೆ ಇರುವ ವಿಮಾನ ಆಕೃತಿಯ ಗೋಪುರ ಆನಂದ ನಿಲಯಕ್ಕೆ ಹೊದಿಸಲಾಗಿದ್ದ ಚಿನ್ನದ ಲೇಪನವನ್ನು ಬದಲಿಸಲು ತಿರುಮಲ ತಿರುಪತಿ ದೇವಸ್ಥಾನಂ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ನೂತನ ಚಿನ್ನದ ಲೇಪನ ಕಾರ್ಯ ಪೂರ್ಣಗೊಳ್ಳುವವರೆಗೆ ದೇವಸ್ಥಾನದ ಸಮೀಪ ತಾತ್ಕಾಲಿಕವಾಗಿ ವೆಂಕಟೇಶ್ವರ ವಿಗ್ರಹ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುವುದು. ಫೆಬ್ರವರಿಯಲ್ಲಿ ಕೆಲಸ ಆರಂಭಗೊಳ್ಳಲಿದ್ದು, ಈ ಚಿನ್ನದ ಲೇಪನದ ಕಾರ್ಯ ಪೂರ್ಣಗೊಳ್ಳಲು 6 ತಿಂಗಳು ಬೇಕಾಗಬಹುದು ಎಂದು ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ವೈ.ವಿ.ಸುಬ್ಬ ರಾವ್ ತಿಳಿಸಿದ್ದಾರೆ.
ಈ ಸಮಯದಲ್ಲಿ ಭಕ್ತರು ತಿಮ್ಮಪ್ಪನ ದರ್ಶನ ಪಡೆಯೋದಕ್ಕಾಗಿ ಮುಖ್ಯ ದೇವಾಲಯದ ಪಕ್ಕದಲ್ಲಿ ತಾತ್ಕಾಲಿಕವಾಗಿ ತಿರುಪತಿ ವೆಂಕಟೇಶ್ವರ ದೇವರ ತದ್ರೂಪಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಭಕ್ತರ ದರ್ಶನಕ್ಕೆ ಅನುವು ಮಾಡಲು ಯೋಜಿಸಲಾಗಿದೆ. ಡಿಸೆಂಬರ್ ಮೊದಲ ವಾರದಲ್ಲಿ ಟ್ರಸ್ಟ್ನ ಮಂಡಳಿ ಸಭೆಯಲ್ಲಿ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ.