ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಮೇಕೆದಾಟು ಜಲಾಶಯ ಯೋಜನೆ ಮತ್ತೆ ರಾಜಕೀಯ ಕಾವು ಪಡೆದುಕೊಂಡಿದೆ. ಕಾವೇರಿ ನದಿಗೆ ಅಡ್ಡಲಾಗಿ ಯೋಜನೆಗೆ ಭೂಮಿ ಪೂಜೆ ಘೋಷಣೆ ಮಾಡಿರುವ ಬೆನ್ನಲ್ಲೇ ತಮಿಳುನಾಡು ಸರ್ಕಾರ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಇದೀಗ ತಮಿಳುನಾಡು ಮುಖ್ಯಮಂತ್ರಿ ವಿಜಯ್, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸುದೀರ್ಘ ಪತ್ರ ಬರೆದು, ಮೇಕೆದಾಟು ಯೋಜನೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎಂದು ಒತ್ತಾಯಿಸಿದ್ದಾರೆ. ತಮಿಳುನಾಡಿನ ಹಿತಾಸಕ್ತಿಗೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿರುವ ಅವರು, ರಾಜ್ಯದ ಒಪ್ಪಿಗೆಯಿಲ್ಲದೆ ಯಾವುದೇ ಹೊಸ ಯೋಜನೆ ಕೈಗೆತ್ತಿಕೊಳ್ಳಬಾರದು ಎಂದು ಹೇಳಿದ್ದಾರೆ.
ಇದಲ್ಲದೆ, ತಮಿಳುನಾಡು ಸರ್ಕಾರದ ಅಭಿಪ್ರಾಯವನ್ನು ಪರಿಗಣಿಸಿ, ಕರ್ನಾಟಕ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಕೂಡ PM ಮೋದಿಗೆ ಮನವಿ ಮಾಡಿದ್ದಾರೆ. ಈ ಬೆಳವಣಿಗೆಯಿಂದ ಕಾವೇರಿ ನೀರು ಹಂಚಿಕೆ ವಿವಾದ ಮತ್ತೆ ಉಭಯ ರಾಜ್ಯಗಳ ನಡುವೆ ರಾಜಕೀಯ ಸಂಘರ್ಷಕ್ಕೆ ಕಾರಣವಾಗುವ ಸಾಧ್ಯತೆ ಇದೆ.







