ರಾಜ್ಯದಲ್ಲಿ ಕೊರೊನಾ ಮ’ರಣಕೇಕೆ’ : ಇಂದು 3649 ಮಂದಿಗೆ ಪಾಸಿಟಿವ್, 61 ಮಂದಿ ಬಲಿ
ಬೆಂಗಳೂರು : ರಾಜ್ಯದಲ್ಲಿ ರಕ್ಕಸ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದೆ. ಇಂದು ಒಂದೇ ದಿನ 3649 ಮಂದಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದ್ದು, 61 ಮಂದಿ ಹೆಮ್ಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 71,069ಕ್ಕೇರಿಕೆಯಾಗಿದ್ದು, ಹೆಮ್ಮಾರಿಗೆ ಮೃತಪಟ್ಟವರ ಸಂಖ್ಯೆ 1464ಕ್ಕೆ ತಲುಪಿದೆ
ಇನ್ನು ರಾಜ್ಯದಲ್ಲಿ ಚೇತರಿಕೆ ಪ್ರಮಾಣವೂ ಉತ್ತಮವಾಗಿದ್ದು, ಇಂದು 1664 ಮಂದಿ ಸೋಂಕಿನಿಂದ ಗುಣಮುಖರಾಗಿ, ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ರಾಜ್ಯದಲ್ಲಿ 44,140 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಇಂದು ಕೂಡ ಕೊರೊನಾಸುರ ಘರ್ಜಿಸಿದ್ದು, 1714 ಹೊಸ ಪ್ರಕರಣಗಳು ವರದಿಯಾಗಿವೆ. ಇಂದು 22 ಮಂದಿ ಸೋಂಕಿಗೆ ಬಲಿಯಾಗಿದ್ದರೇ, 520 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ನಗರದಲ್ಲಿ 26746 ಸಕ್ರಿಯ ಪ್ರಕರಣಗಳಿವೆ.








