ಬೆಂಗಳೂರು: ಡ್ರಗ್ಸ್ ಪೆಡ್ಲರ್ ಜತೆ ನಂಟು ಹೊಂದಿರುವ ಆರೋಪದಡಿ ಬಂಧನಕ್ಕೊಳಗಾಗಿರುವ ನಟಿ ರಾಗಿಣಿ ದ್ವಿವೇದಿ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ.
ಇದೇ ವೇಳೆ ರಾಗಿಣಿ ದ್ವಿವೇದಿ ಸಿಸಿಬಿ ಕಸ್ಟಡಿ ಇಂದು ಅಂತ್ಯವಾಗಲಿದ್ದು, ಜೈಲಾ..ಬೇಲಾ ಎಂಬುದು ನಿರ್ಧಾರವಾಗಲಿದೆ.
ಕಳೆದ 8 ದಿನಗಳಿಂದ ಕಷ್ಟಡಿಯಲ್ಲಿರುವ ರಾಗಿಣಿ ವಿಚಾರಣೆಗೆ ಸಹಕಾರ ನೀಡುತ್ತಿಲ್ಲ. ಹೀಗಾಗಿ ಇನ್ನಷ್ಟು ದಿನ ಕಸ್ಟಡಿಗೆ ನೀಡುವಂತೆ ಸಿಸಿಬಿ ಪೊಲೀಸರು ಕೋರ್ಟ್‍ಗೆ ಮನವಿ ಮಾಡಿಕೊಳ್ಳುವ ಸಾಧ್ಯತೆ ಇದೆ.
ಕೋರ್ಟ್ ಸಿಸಿಬಿ ಮನವಿ ಪುರಸ್ಕರಿಸಿ ಕಸ್ಟಡಿಗೆ ರಾಗಿಣಿಯನ್ನು ಇನ್ನಷ್ಟು ದಿನ ನೀಡಬಹುದು ಇಲ್ಲವೇ, ಇಷ್ಟು ದಿನ ಕಸ್ಟಡಿಗೆ ನೀಡಿದ್ದು ಸಾಕು ಎಂದು ತೀರ್ಮಾನಿಸಿ ನ್ಯಾಯಾಂಗ ಬಂಧನ(ಜೈಲಿಗೆ)ಕ್ಕೆ ಕಳಿಸುವ ಸಾಧ್ಯತೆ ಇದೆ.
ಮತ್ತೊಂದೆಡೆ, ಬೆಂಗಳೂರಿನ 33ನೇ ಸಿಸಿಎಚ್ ನ್ಯಾಯಾಲಯದಲ್ಲಿ ರಾಗಿಣಿ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಮುಂಬೈನಿಂದ ಬಂದಿರುವ ವಕೀಲರು ರಾಗಿಣಿ ಪರ ನ್ಯಾಯಾಲಯದಲ್ಲಿ ವಾದ ಮಂಡಿಸಲಿದ್ದು, ಜಾಮೀನು ನೀಡುವಂತೆ ಮನವಿ ಮಾಡಲಿದ್ದಾರೆ.
ರಾಗಿಣಿ ಸೇರಿದಂತೆ 14 ಆರೋಪಿಗಳ ವಿರುದ್ಧ ಎನ್‍ಡಿಪಿಎಸ್ ಆಕ್ಟ್‍ನ್ ಸೆಕ್ಷನ್ 21, 21ಸಿ, 27ಎ, 27ಬಿ, 29, ಐಪಿಸಿ 120ಬಿ ಅಡಿ ಎಫ್‍ಐಆರ್ ದಾಖಲಾಗಿದೆ. ಈ ಸೆಕ್ಷನ್‍ಗಳಡಿ ಪ್ರಕರಣ ದಾಖಲಾಗಿರುವ ಕಾರಣ ಕೆಳ ಹಂತದ ನ್ಯಾಯಾಲಯದಲ್ಲಿ ಜಾಮೀನು ಸಿಗುವುದು ಕಷ್ಟ ಎಂಬ ಅಭಿಪ್ರಾಯ ಕೇಳಿ ಬರುತ್ತಿದೆ.
ಆದರೆ, ರಾಗಿಣಿ ಪರ ವಕೀಲರು ಜಾಮೀನು ಸಿಗುವ ವಿಶ್ವಾಸದಲ್ಲಿದ್ದಾರೆ. ರಾಗಿಣಿ ವಿರುದ್ಧ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಸಿದಂತೆ ಸಿಸಿಬಿ ಪೊಲೀಸರ ಬಳಿ ಯಾವುದೇ ಸಾಕ್ಷ್ಯಾಧಾರಗಳಿಲ್ಲ. ಹೀಗಾಗಿ ಈ ಪ್ರಕರಣದಲ್ಲಿ ರಾಗಿಣಿಗೆ ಸುಲಭವಾಗಿ ಜಾಮೀನು ಸಿಗಲಿದೆ ಎಂದು ಹೇಳಿದ್ದಾರೆ.
ರಾಗಿಣಿ ಜತೆ ಇನ್ನೂ 5 ಆರೋಪಿಗಳ ಕಷ್ಟಡಿಯೂ ಇಂದಿಗೆ ಅಂತ್ಯಗೊಳ್ಳಲಿದ್ದು, ಅವರನ್ನು ಮತ್ತೆ ಕಸ್ಟಡಿಗೆ ನೀಡುವಂತೆ ಸಿಸಿಬಿ ನ್ಯಾಯಾಲಯಕ್ಕೆ ಮನವಿ ಮಾಡುವ ಸಾಧ್ಯತೆ ಇದೆ.
ಒಳ ಮೀಸಲಾತಿ ಜೇನುಗೂಡಿಗೆ ಕೈಹಾಕಿದ ರಾಜ್ಯ ಸರ್ಕಾರ: ದಶಕಗಳ ಹೋರಾಟಕ್ಕೆ ಕೊನೆಗೂ ಸಿಕ್ಕಿತು ಜಯ! ಯಾವ ಸಮುದಾಯಕ್ಕೆ ಎಷ್ಟು ಸಿಗಲಿದೆ ಪಾಲು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್!
ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ದಶಕಗಳಿಂದಲೂ ಚರ್ಚೆಯಲ್ಲಿದ್ದ ಹಾಗೂ ತೀವ್ರ ಕುತೂಹಲ ಮೂಡಿಸಿದ್ದ ಒಳ ಮೀಸಲಾತಿ ಕಗ್ಗಂಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೊನೆಗೂ ಪರಿಹಾರ ಕಂಡುಹಿಡಿದಿದೆ....








