ನ. 26, 2024, ಮುಖ್ಯಮಂತ್ರಿಗಳಿಗೆ ಬಿಗ್ ಟೆನ್ಷನ್ ಡೇ ಹೈಕೋರ್ಟ್ ಆದೇಶದ ಪ್ರಕಾರ, ಲೋಕಾಯುಕ್ತ ಪೊಲೀಸರು ಮುಡಾ (ಮೈಸೂರು ಅರ್ಭನ್ ಡೆವಲಪ್‌ಮೆಂಟ್ ಅಥಾರಿಟಿ) ಹಗರಣದ ತನಿಖೆಯನ್ನು ಪೂರ್ಣಗೊಳಿಸಿ, ವರದಿಯನ್ನು ಹೈಕೋರ್ಟ್‌ಗೆ ಸಲ್ಲಿಸಬೇಕಾಗಿದೆ. ಲೋಕಾಯುಕ್ತ ಎಸ್‌ಪಿ ಉದೇಶ್ ನೇತೃತ್ವದಲ್ಲಿ 400 ಪುಟಗಳ ತನಿಖಾ ವರದಿ ಸಿದ್ಧವಾಗಿದೆ, ಮತ್ತು ಇದನ್ನು ಇಂದು ಹೈಕೋರ್ಟ್‌ಗೆ ಸಲ್ಲಿಸಲಾಗುವುದು.
ಹೈಕೋರ್ಟ್ ಈ ಹಿಂದೆ ನ. 26ಕ್ಕೆ ಡೆಡ್‌ಲೈನ್ ನೀಡಿತ್ತು, ಮತ್ತು ಈ ಪ್ರಕರಣವು ತೀವ್ರ ರಾಜಕೀಯ ಮತ್ತು ಸಾರ್ವಜನಿಕ ಕುತೂಹಲಕ್ಕೆ ಕಾರಣವಾಗಿದೆ.
ಮುಡಾ ಹಗರಣದ ಸಿಬಿಐ ತನಿಖೆಗೆ ಸಂಬಂಧಿಸಿದ ಅರ್ಜಿ, ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ, ಇಂದು ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದೆ.ಈ ಬೆಳವಣಿಗೆಗಳು ಸರ್ಕಾರ ಮತ್ತು ಮುಖ್ಯಮಂತ್ರಿಗಳ ಮೇಲೆ ಹೆಚ್ಚಿನ ಒತ್ತಡವನ್ನು ಸೃಷ್ಟಿ ಮಾಡಿದೆ.







