ಇಂದೇ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ

1 min read
Puneet Rajkumar's saaksha tv

ಇಂದೇ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ Puneet Rajkumar’s saaksha tv

ಬೆಂಗಳೂರು : ಇಂದು ಸಂಜೆಯೇ ಪುನೀತ್ ರಾಜಕುಮಾರ್ ಅವರ ಅಂತ್ಯಕ್ರಿಯೆಯನ್ನು ಕಂಠೀರವ ಸ್ಟುಡಿಯೋದಲ್ಲಿ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.

ಕನ್ನಡದ ನಟಸಾರ್ವಭೌಮ ಪುನೀತ್ ರಾಜಕುಮಾರ್ ಶುಕ್ರವಾರ ಹೃದಯಾಘಾತದಿಂದ ಕೊನೆಯುಸಿರೆಳೆದರು.

ಸದ್ಯ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಅವರ ಅಂತ್ಯಕ್ರಿಯೆಯನ್ನು ಇಂದು ಸಂಜೆ 5.30ರ ಸುಮಾರಿಗೆ ನಡೆಸಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ.

Puneet Rajkumar's saaksha tv

ಹೀಗಾಗಿ ಅಂತಿಮ ದರ್ಶನವನ್ನು ಪಡೆಯಲು ಅಭಿಮಾನಿಗಳಿಗೆ ಇಂದು ಮಧ್ಯಾಹ್ನ 3 ಗಂಟೆಯವರಿಗೂ ವ್ಯವಸ್ಥೆಗೊಳಿಸಲಾಗಿದೆ.

3 ಗಂಟೆಯ ನಂತರ ಕಾಪೋರೇಷನ್, ಮೈಸೂರು ಬ್ಯಾಂಕ್, ಯಶವಂತಪುರ, ಗೊರಗುಂಟೆಪಾಳ್ಯ ಮಾರ್ಗವಾಗಿ ಕಂಠೀರವ ಸ್ಟುಡಿಯೋದವರೆಗೂ ಮೆರವಣಿಗೆ ನಡೆಸಲಾಗುತ್ತದೆ.

ಬಳಿಕ ಸಂಜೆ 5 ಗಂಟೆ ಸುಮಾರಿಗೆ ಅವರ ಅಂತ್ಯಕ್ರಿಯೆ ನಡೆಸಲಾಗುವುದು.

ಇನ್ನು ಅಭಿಮಾನಿಗಳನ್ನು ಕಂಠೀರವ ಸ್ಟುಡಿಯೋಗೆ ಬರದಂತೆ ಕುಟುಂಬಸ್ಥರು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd