ಬೆಂಗಳೂರು : ಇಂದು ಕರುನಾಡಿನ ಹೆಮ್ಮೆ, ಮಾತೃ ಹೃದಯಿ ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಶ್ರೀಮತಿ ಸುಧಾ ಮೂರ್ತಿ ಅವರಿಗೆ ಜನ್ಮದಿನ. ಹೀಗಾಗಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು ಟ್ವಿಟ್ಟರ್ ನಲ್ಲಿ ಶುಭಕೋರಿದ್ದಾರೆ.
ಮುಖ್ಯಮಂತ್ರಿಗಳ ಟ್ವೀಟ್ ನಲ್ಲಿ.. ಪ್ರಸಿದ್ಧ ಲೇಖಕರು, ರಾಜ್ಯದ ಪ್ರವಾಸೋದ್ಯಮ ಕಾರ್ಯಪಡೆಯ ಮುಖ್ಯಸ್ಥೆಯಾಗಿ ಸಕ್ರಿಯರಾಗಿರುವ, ಕೋವಿಡ್ ನೆರವು ಸೇರಿದಂತೆ ಅನೇಕ ಸಮಾಜಮುಖಿ ಕಾರ್ಯಗಳಿಂದ ಶ್ಲಾಘನೀಯ ಸೇವೆ ಸಲ್ಲಿಸುತ್ತಿರುವ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಶ್ರೀಮತಿ ಸುಧಾ ಮೂರ್ತಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರ ಅನುಗ್ರಹ ಸದಾ ಇರಲಿ ಎಂದು ಹಾರೈಸುತ್ತೇನೆ ಎಂದು ಶುಭ ಕೋರಿದ್ದಾರೆ.
ಆರೋಗ್ಯ ಸಚಿವ ಬಿ. ಶ್ರೀರಾಮುಲು ಟ್ವೀಟ್ ಮಾಡಿ, “ಇನ್ಫೋಸಿಸ್ ಪ್ರತಿಷ್ಠಾನದ ಮೂಲಕ ಹಲವಾರು ಜನಪರ ಕೆಲಸಗಳನ್ನು ಮಾಡುತ್ತಿರುವ, ಹಿರಿಯರು, ಆತ್ಮೀಯರಾದ ಶ್ರೀಮತಿ ಸುಧಾ ಮೂರ್ತಿ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.
ತಮ್ಮ ಜನ ಸೇವೆ ಹೀಗೆಯೇ ಮುಂದುವರೆಯಲಿ, ಭಗವಂತ ನಿಮಗೆ ಉತ್ತಮ ಆರೋಗ್ಯ ಹಾಗೂ ಆಯುಷ್ಯ ನೀಡಿ ಆಶೀರ್ವದಿಸಲಿ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
“ಕನ್ನಡನಾಡಿನ ಹೆಮ್ಮೆಯ ಪುತ್ರಿ, ಮಮತೆ ವಾತ್ಸಲ್ಯಗಳ ಸಾಕಾರ ಮೂರ್ತಿ, ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಶ್ರೀಮತಿ ಸುಧಾ ಮೂರ್ತಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ತಮ್ಮ ಸಾಧನೆ ಮತ್ತು ಸೇವೆಯಿಂದ ಇಡೀ ದೇಶಕ್ಕೆ ಸ್ಪೂರ್ತಿಯಾಗಿರುವ ಅವರಿಗೆ ದೇವರು ಉತ್ತಮ ಆಯುರಾರೋಗ್ಯ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅವರು ಟ್ವೀಟ್ ಮೂಲಕ ಹುಟ್ಟುಹಬ್ಬದ ಶುಭಶಯ ತಿಳಿಸಿದ್ದಾರೆ.
ಕನ್ನಡನಾಡಿನ ಹೆಮ್ಮೆಯ ಪುತ್ರಿ, ಮಮತೆ ವಾತ್ಸಲ್ಯಗಳ ಸಾಕಾರ ಮೂರ್ತಿ, ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಶ್ರೀಮತಿ ಸುಧಾ ಮೂರ್ತಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ತಮ್ಮ ಸಾಧನೆ ಮತ್ತು ಸೇವೆಯಿಂದ ಇಡೀ ದೇಶಕ್ಕೆ ಸ್ಪೂರ್ತಿಯಾಗಿರುವ ಅವರಿಗೆ ದೇವರು ಉತ್ತಮ ಆಯುರಾರೋಗ್ಯ ನೀಡಲಿ ಎಂದು ಪ್ರಾರ್ಥಿಸುತ್ತೇನೆ.@Infy_Foundation pic.twitter.com/oZoR02k7ri
— Dr Sudhakar K (@mla_sudhakar) August 19, 2020