ADVERTISEMENT
Tuesday, August 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪ್ರಯಾಣಿಕರೆ ಇತ್ತ ಗಮನಿಸಿ: ಇಂದು ಬೆಂಗಳೂರಿನಲ್ಲಿ ಸಾರಿಗೆ ನೌಕರರ ಜಾಥಾ; ಬಸ್ ಸಂಚಾರ ಡೌಟ್..!

Kariyappa N by Kariyappa N
December 10, 2020
in Newsbeat, Samagra karnataka, ರಾಜ್ಯ
special bus
Share on FacebookShare on TwitterShare on WhatsappShare on Telegram

                        ಜಾಥಾದಲ್ಲಿ ಒಂದು ಲಕ್ಷಕ್ಕೂ ಅಧಿಕ ನೌಕರರು ಭಾಗಿ ಸಾಧ್ಯತೆ
                        ಮತ್ತೆ ಬೆಂಗಳೂರಿಗರಿಗೆ ಟ್ರಾಫಿಕ್ ಜಾಮ್ ಬಿಸಿ ಪಕ್ಕಾ
                       ರಾಜ್ಯಾದ್ಯಂತ ಬಿಎಂಟಿಸಿ, ಕೆಎಸ್‍ಆರ್‍ ಟಿಸಿ ಬಸ್ ಸಂಚಾರ ಅನುಮಾನ
ಬೆಂಗಳೂರು: ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಒತ್ತಾಯಿಸಿ ಬಿಎಂಟಿಸಿ, ಕೆಎಸ್‍ಆರ್‍ಟಿಸಿ ಸೇರಿದಂತೆ ಎಲ್ಲಾ ಸಾರಿಗೆ ಸಂಸ್ಥೆಗಳ ಸುಮಾರು 1 ಲಕ್ಷಕ್ಕೂ ಹೆಚ್ಚು ನೌಕರರು ಇಂದು ಬೆಂಗಳೂರಿನಲ್ಲಿ ಕಾಲ್ನಡಿಗೆ ಜಾಥಾ ಮೂಲಕ ಪ್ರತಿಭಟನೆ ನಡೆಸಲಿದ್ದಾರೆ.
ಹೀಗಾಗಿ ಇಂದು ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಸರ್ಕಾರಿ ಬಸ್‍ಗಳು ರಸ್ತೆಗಿಳಿಯುವುದು ಅನುಮಾನವಾಗಿದೆ. ಇಂದು ಜನರು ಸರ್ಕಾರಿ ಬಸ್‍ಗಳ ಮೂಲಕ ಪ್ರಯಾಣಿಸುವ ಪ್ಲಾನ್ ಹಾಕಿಕೊಂಡಿದ್ದರೆ ಮುಂದೂಡುವುದು ಒಳ್ಳೆಯದು.
ಕೆಎಸ್‍ಆರ್‍ಟಿಸಿ, ಬಿಎಂಟಿಸಿ, ಎನ್‍ಇಕೆಆರ್‍ಟಿಸಿ ಹಾಗೂ ಎನ್‍ಡಬ್ಲೂಕೆಆರ್‍ಟಿಸಿ ಸೇರಿ ರಾಜ್ಯದಲ್ಲಿ 1.40 ಲಕ್ಷ ನೌಕರರು ಸೇವೆ ಸಲ್ಲಿಸುತ್ತಿದ್ದಾರೆ. ಇವರಲ್ಲಿ ಒಂದು ಲಕ್ಷಕ್ಕೂ ಹೆಚ್ಚು ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ನೌಕರರ ಜತೆ ಅವರ ಪತ್ನಿಯರು ಹಾಗೂ ಮಕ್ಕಳೂ ಕೂಡ ಪಾಲ್ಗೊಳ್ಳುತ್ತಿರುವುದರಿಂದ ಮತ್ತೆ ಬೆಂಗಳೂರು ನಗರ ಟ್ರಾಫಿಕ್‍ನಿಂದ ಲಾಕ್ ಆಗುವ ಸಾಧ್ಯತೆ ಇದೆ.


ಮರಾಠ ಅಭಿವೃದ್ಧಿ ಪ್ರಾಧಿಕಾರ, ಕೃಷಿ ಕಾಯ್ದೆಗಳ ವಿರುದ್ಧ ನಡೆದ ಕರ್ನಾಟಕ ಬಂದ್, ಭಾರತ್ ಬಂದ್ ಹಾಗೂ ಬಾರುಕೋಲು ಚಳವಳಿ ಸೇರಿ ಸಾಲು ಸಾಲು ಪ್ರತಿಭಟನೆಗಳಿಂದ ತತ್ತರಿಸಿರುವ ಬೆಂಗಳೂರು ನಗರದ ಜನತೆಗೆ ಇಂದೂ ಕೂಡ ಪ್ರತಿಭಟನೆ ಬಿಸಿ ತಟ್ಟಲಿದೆ.
ಬೆಳಗ್ಗೆ 10 ಗಂಟೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ವಿಧಾನಸೌಧಧವರೆಗೆ ಸಾರಿಗೆ ನೌಕರರು ಕಾಲ್ನಡಿಗೆ ಜಾಥಾ ಹೊರಡಲಿದ್ದಾರೆ. ಸಾರಿಗೆ ನೌಕರರ ನಡಿಗೆ- ಸರ್ಕಾರಿ ನೌಕರರಾಗುವ ಕಡೆಗೆ ಎಂಬ ಘೋಷಣೆಯೊಂದಿಗೆ ಹೋರಾಟ ನಡೆಸಲಿದ್ದಾರೆ. ಜತೆಗೆ ಈ ಜಾಥಾದಲ್ಲಿ ನಂಜಾವಧೂತ ಸ್ವಾಮೀಜಿ, ಚಂದ್ರಶೇಖರ ಸ್ವಾಮೀಜಿ ಹಾಗೂ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಸಹ ಭಾಗಿಯಾಗಲಿದ್ದಾರೆ ಎಂದು ನೌಕರರ ಸಂಘ ತಿಳಿಸಿದೆ.

Related posts

asthalakshmi-mantra-money-remedy-friday-astrology-tips

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ.

August 11, 2026
biscoff-swiggy-dineout-dm-a-lonely-cup-campaign-offers

August 11, 2026

ಸಾರಿಗೆ ನೌಕರರು ಸರ್ಕಾರಿ ನೌಕರರಾಗಿ ಪರಿಗಣನೆ ಇಲ್ಲ-ಸವದಿ
ಕೆಎಸ್‍ಆರ್‍ಟಿಸಿ, ಬಿಎಂಟಿಸಿ ಸೇರಿದಂತೆ ಸಾರಿಗೆ ನಿಗಮಗಳ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಸಾರಿಗೆ ನೌಕರರ ಎಲ್ಲಾ ವೇತನ ಬಿಡುಗಡೆ ಮಾಡಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ 4 ಸಾರಿಗೆ ನಿಗಮಗಳು ನಷ್ಟದಲ್ಲಿವೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಮಾನವೀಯತೆ ಮೇರೆದು ಸಂಬಳ ನೀಡಲು ಹಣಕಾಸು ಸೌಲಭ್ಯ ಕಲ್ಪಿಸಿದ್ದಾರೆ. ಹೀಗಾಗಿ ನೌಕರರ 7 ತಿಂಗಳ ಸಂಬಳ ಪಾವತಿ ಮಾಡಲಾಗಿದೆ. ಉಳಿದ 2 ತಿಂಗಳ 8-10 ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಲಕ್ಷ್ಮಣ್ ಸವದಿ ವಿಧಾನಸಭೆಯಲ್ಲಿ ಮಾಹಿತಿ ನೀಡಿದ್ದಾರೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: bangaloreBMTC employeesbus service may hit statewideKSRTCToday transport employ protest
ShareTweetSendShare
Join us on:

Related Posts

asthalakshmi-mantra-money-remedy-friday-astrology-tips

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ.

by admin
August 11, 2026
0

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ. 28-08-2026 ರಂದು ನಗದು ಅಗತ್ಯವನ್ನು ಪೂರೈಸಲು...

biscoff-swiggy-dineout-dm-a-lonely-cup-campaign-offers

by admin
August 11, 2026
0

ಒಂಟಿ ಕಾಫಿ ಕಪ್ ಫೋಟೋ ಕಳುಹಿಸಿ, ಆಕರ್ಷಕ ಗಿಫ್ಟ್ ಗೆಲ್ಲಿ: ಟೀ - ಕಾಫಿ ಪ್ರಿಯರಿಗಾಗಿ ವಿನೂತನ ಆಫರ್!  ಬೆಂಗಳೂರು: ಬಿಸಿ ಬಿಸಿ ಟೀ ಅಥವಾ ಕಾಫಿ...

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ:  ಸಂಘಟನೆಗಳ  ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ: ಸಂಘಟನೆಗಳ ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

by Shwetha
August 11, 2026
0

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಆಗಸ್ಟ್ 13ರಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಈಗ ಅನಿಶ್ಚಿತತೆಯ ಸುಳಿಗೆ ಸಿಲುಕಿದೆ. ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಗಳು...

ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್; ಶೀಘ್ರದಲ್ಲೇ ಪ್ರಾಯೋಗಿಕ ಸಂಚಾರ ಶುರು

ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್; ಶೀಘ್ರದಲ್ಲೇ ಪ್ರಾಯೋಗಿಕ ಸಂಚಾರ ಶುರು

by Shwetha
August 11, 2026
0

ಬೆಂಗಳೂರು-ಮುಂಬೈ ನಡುವಿನ ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಸಿದ್ಧತೆಗಳು ಅಂತಿಮ ಹಂತಕ್ಕೆ ತಲುಪಿವೆ. ರೈಲ್ವೆ ಇಲಾಖೆ ರೈಲು ಸಂಚಾರ ಆರಂಭಿಸುವ ನಿಟ್ಟಿನಲ್ಲಿ ಅಗತ್ಯ ಪ್ರಕ್ರಿಯೆಗಳನ್ನು...

ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭಾರೀ ಭೂಕುಸಿತ: ಪೊಲೀಸ್ ವಸತಿ ಗೃಹಗಳಲ್ಲಿ ಕಸದ ರಾಶಿ

ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭಾರೀ ಭೂಕುಸಿತ: ಪೊಲೀಸ್ ವಸತಿ ಗೃಹಗಳಲ್ಲಿ ಕಸದ ರಾಶಿ

by Shwetha
August 11, 2026
0

ಕೊಡಗು ಜಿಲ್ಲೆಯ ಮಡಿಕೇರಿ ನಗರದ ಸ್ಟೋನ್ ಹಿಲ್ ಬೆಟ್ಟದಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಬೆಟ್ಟದ ಮೇಲಿದ್ದ ನೂರಾರು ಟನ್‌ಗಳಷ್ಟು ಕಸದ ರಾಶಿ ಮಣ್ಣು ಹಾಗೂ ಕೆಸರಿನೊಂದಿಗೆ ಕೆಳಭಾಗಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram