ಇಂದು ಪರಿಷತ್ ಸಭಾಪತಿ ಎಲೆಕ್ಷನ್ : ಪಕ್ಷಗಳ ಬಲಾಬಲ ಹೀಗಿದೆ
ಬೆಂಗಳೂರು : ಪ್ರತಾಪ ಚಂದ್ರಶೆಟ್ಟಿ ರಾಜೀನಾಮೆಯಿಂದ ತೆರವಾಗಿರುವ ಪರಿಷತ್ ಸಭಾಪತಿ ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದೆ.
ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಬಸವರಾಜ ಹೊರಟ್ಟಿ ಹಾಗು ಕಾಂಗ್ರೆಸ್ ಅಭ್ಯರ್ಥಿಯಾಗಿ ನಸೀರ್ ಅಹಮದ್ ಕಣದಲ್ಲಿದ್ದಾರೆ.
ಬಹುತೇಕ ಬಸವರಾಜ್ ಹೊರಟ್ಟಿಯೇ ಜಯಗಳಿಸುವ ಸಾಧ್ಯತೆಗಳಿವೆ ಎಂದು ಅಂದಾಜಿಸಲಾಗುತ್ತಿದೆ.
ಇನ್ನು ಪರಿಷತ್ ನಲ್ಲಿ ಮೂರು ಪಕ್ಷಗಳ ಬಲಾಬಲ ಹೇಗಿದೆ ಅನ್ನೋದನ್ನ ನೋಡೋದಾದ್ರೆ.
ಒಟ್ಟು 75 ಸದಸ್ಯ ಬಲದ ವಿಧಾನ ಪರಿಷತ್ ನಲ್ಲಿ ಅಭ್ಯರ್ಥಿ ಗೆಲುವಿಗೆ 38 ಸದಸ್ಯರ ಬೆಂಬಲ ಬೇಕು. ಬಿಜೆಪಿ-31, ಕಾಂಗ್ರೆಸ್-28, ಜೆಡಿಎಸ್-13(ಧರ್ಮೇಗೌಡ ನಿಧನದಿಂದ ಒಂದು ಸ್ಥಾನ ಖಾಲಿ ಇದೆ.)
ಪಕ್ಷೇತರ-1 ಹಾಗು ಸಭಾಪತಿ/ಉಪಸಭಾಪತಿ-1 ಸ್ಥಾನವಿದೆ. ಬಿಜೆಪಿ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದರಿಂದ ಜೆಡಿಎಸ್ ನಬಸವರಾಜ ಹೊರಟ್ಟಿ ಗೆಲುವು ಬಹುತೇಕ ನಿಶ್ಚಿತವಾಗಿದೆ.
ಆದರೆ ನಿನ್ನೆ ಗೋ ಹತ್ಯಾ ನಿಷೇಧ ಕಾಯ್ದೆ, ಕೃಷಿ ಕಾನೂನುಗಳ ವಿಚಾರವಾಗಿ ಬಿಜೆಪಿ ವಿರುದ್ಧ ಜೆಡಿಎಸ್ ನ ಕೆಲ ಸದಸ್ಯರು ಅಸಮಾಧಾನಗೊಂಡಿದ್ದಾರೆ.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಇದಲ್ಲದೆ ಜೆಡಿಎಸ್ ಸದಸ್ಯರ ವಿರುದ್ಧ ಬಿಜೆಪಿ ಸದಸ್ಯರು ಕೂಡ ಗರಂ ಆಗಿದ್ದು, ಇದು ಬಸವರಾಜ ಹೊರಟ್ಟಿ ಗೆಲುವಿಗೆ ಅಡ್ಡಿಯುಂಟು ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel