ತೌಕ್ತೆ ಎಫೆಕ್ಟ್ : ಇಂದು, ನಾಳೆ ರಾಜ್ಯದಲ್ಲಿ ಮಳೆ ಸಾಧ್ಯತೆ rain
ಬೆಂಗಳೂರು : ತೌಕ್ತೆ ಚಂಡಮಾರುತದ ಪರಿಣಾಮವಾಗಿ ರಾಜ್ಯದಲ್ಲಿ ಇಂದು ಹಾಗೂ ನಾಳೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸದ್ಯ ರಾಜ್ಯದಲ್ಲಿ ತೌಕ್ತೆ ಅಬ್ಬರ ಕಡಿಮೆಯಾಗಿದ್ದರೂ ಇಂದು ನಾಳೆ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆಗಳಿವೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮೇ. 19 ರವರೆಗೆ ಮಳೆಯಾಗಲಿದೆ.
ಈ ಹಿನ್ನೆಲೆಯಲ್ಲಿ ಆ ಭಾಗದಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ಇದಲ್ಲದೆ ನಾಳೆಯವರೆಗೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.