ರಾಜ್ಯದಲ್ಲಿ ಜಾರಿ ಇದ್ದ ವೀಕೆಂಡ್ ಕರ್ಫ್ಯೂ ರದ್ದಾಗಿದೆ. ಈ ಕುರಿತು ಕಂದಾಯ ಸಚಿವ ಆರ್.ಅಶೋಕ್ ಮಾಹಿತಿ ನೀಡಿದ್ದಾರೆ. ಕೊರೊನಾ ಹೆಚ್ಚಳ ಮತ್ತು ವೀಕೆಂಡ್ ಕರ್ಫ್ಯೂ ರದ್ದು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯಿತು. ಈ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ರದ್ದು ಮಾಡಲಾಗಿದೆ. ಆದ್ರೆ ಉಳಿದ ನಿಯಮಗಳು ಎಂದಿನಂತೆ ಜಾರಿಯಲ್ಲಿರಲಿದೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಮಾತ್ರ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ಧಾರೆ. ಸಿಎಂ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಿಣ ಸಚಿವ ಬಿ.ಸಿ.ನಾಗೇಶ್, ಕೊರೊನಾ ಸೋಂಕು ಹೆಚ್ಚಿರುವ ಬೆಂಗಳೂರಿನಲ್ಲಿ ಮಾತ್ರ ಶಾಲಾ ಕಾಲೇಜು ಬಂದ್ ಮಾಡಲು ನಿರ್ಧರಿಸಲಾಗಿದೆ. ಬೆಂಗಳೂರು ಹೊರತುಪಡಿಸಿ ಉಳಿದ ಎಲ್ಲಾ ಕಡೆ ಶಾಲೆ ಇರುತ್ತೆ ಎಂದು ತಿಳಿಸಿದರು.
ದೇಶದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು ಕಳೆದ 24 ಗಂಟೆಯಲ್ಲಿ 3,47,254 ಲಕ್ಷ ಪ್ರಕರಣಗಳು ಪತ್ತೆಯಾಗಿವೆ. ಪ್ರತಿದನದ ಸೋಂಕಿನ ಏರಿಕೆ ಪ್ರಮಾಣವು ಶೇ17.94 ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.ಇನ್ನೂ ಸಕ್ರೀಯ ಪ್ರಕರಣಗಳ ಸಂಖ್ಯೆ 20,18,285 ಇದ್ದು ಸಕ್ರೀಯ ಸೋಂಕಿನ ಪ್ರಮಾಣವು 5.23ರಷ್ಟಿದೆ. ಅಲ್ಲದೇ ಕಳೆದ 24 ಗಂಟೆಯಲ್ಲಿ 2,51,777 ಜನ ಚೇತರಿಸಿಕೊಂಡಿದ್ದು, ಚೇತರಿಕೆ ಪ್ರಮಾಣವು ಶೇ 93.50 ರಷ್ಟಿದೆ.
2022ರ ಟಿ-20 ವಿಶ್ವಕಪ್ ಟೂರ್ನಿಯ ವೇಳಾಪಟ್ಟಿಯನ್ನು ಪ್ರಕಟವಾಗಿದ್ದು, ಆಸ್ಟ್ರೇಲಿಯಾ ಆತಿಥ್ಯ ವಹಿಸುತ್ತಿರುವ 2022ರ ವಿಶ್ವಕಪ್ ಟೂರ್ನಿ ಅಕ್ಟೋಬರ್ 16 ರಿಂದ ನವೆಂಬರ್ 13ರವರೆಗೆ ನಡೆಯಲಿದೆ. ಟೂರ್ನಿಯಲ್ಲಿ ಒಟ್ಟು 16 ತಂಡಗಳು ಭಾಗವಹಿಸಲಿವೆ. ಅಡಿಲೇಡ್, ಬ್ರಿಸ್ಬೇನ್, ಗೀಲಾಂಗ್, ಹೊಬಾರ್ಟ್, ಮೆಲ್ಬರ್ನ್, ಪರ್ತ್ ಅಂಗಣದಲ್ಲಿ ಒಟ್ಟು 45 ಪಂದ್ಯಗಳು ನಡೆಯಲಿವೆ.
ಟೀಮ್ ಇಂಡಿಯಾದ ಆಲ್ರೌಂಡರ್ ಅಕ್ಷರ್ ಪಟೇಲ್ ಇಂದು 28ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅಕ್ಷರ್ ತನ್ನ ಬರ್ತ್ ಡೇ ದಿನವೇ ಬಹುಕಾಲದ ಗೆಳತಿ ಮೇಹಾ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಎಂಗೇಜ್ ಮೆಂಟ್ ಫೋಟೋಗಳನ್ನು ತಮ್ಮ ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಅಕ್ಷರ್ಗೆ ಟೀಮ್ ಇಂಡಿಯಾದ ಹಲವು ಆಟಗಾರರು ಶುಭ ಕೋರಿದ್ದಾರೆ.









