ಕೊರೊನಾ ಅಪ್ ಡೇಟ್.. ಕೊಹ್ಲಿಗೆ ನೋಟಿಸ್ : ಓದಿ ಇಂದಿನ ಟಾಪ್ 5 ಸುದ್ದಿ
ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 3,37,704 ಕೊರೊನಾ ಪ್ರಕರಣಗಳು ದಾಖಲಾಗಿವೆ. 488 ಜನರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. 2,42,676 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅವರಿಗೆ ಅಲ್ಪ ಪ್ರಮಾಣದ ರೋಗ ಲಕ್ಷಣ ಕಂಡು ಬಂದಿದೆ.ಸದ್ಯ ಅವರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಗೋವಾ ವಿಧಾನಸಭಾ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಗೋವಾ ಮಾಜಿ ಸಿಎಂ ಮನೋಹರ್ ಪರಿಕ್ಕರ್ ಪುತ್ರ ಉತ್ಪಾಲ್ ಪರಿಕ್ಕರ್ ಕೇಸರಿ ಪಡೆಗೆ ಟಕ್ಕರ್ ನೀಡಿದ್ದಾರೆ. ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಪಕ್ಷ ತೊರೆದು ಸ್ವತಂತ್ರ್ಯ ಅಭ್ಯರ್ಥಿಯಾಗಿ ಚುನಾವಣಾ ಅಖಾಡಕ್ಕೆ ಧುಮುಖಲಿದ್ದಾರೆ.
ಇಂದು ನಟ ನಿಖಿಲ್ ಹುಟ್ಟುಹಬ್ಬದ ಪ್ರಯುಕ್ತ ಹೊಸ ಸಿನಿಮಾ ಟೈಟಲ್ ಹಾಗೂ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಕನ್ನಡದ ಪ್ರತಿಷ್ಠಿತ ಪ್ರೊಡಕ್ಷನ್ ಹೌಸ್ ಕೆವಿಎನ್ ಸಂಸ್ಥೆಯಲ್ಲಿ ನಿಖಿಲ್ ಕುಮಾರ್ ಐದನೇ ಸಿನಿಮಾ ರೆಡಿಯಾಗ್ತಿದೆ. ಈ ಸಿನಿಮಾಗೆ ಯದುವೀರ ಎಂಬ ಟೈಟಲ್ ಇಡಲಾಗಿದೆ.
ವಿರಾಟ್ ಕೊಹ್ಲಿಗೆ ಶೋಕಾಸ್ ನೋಟಿಸ್ ನೀಡಲು ಮುಂದಾಗಿದ್ದೆ ಅನ್ನೋದು ನಿಜವಲ್ಲ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸ್ಪಷ್ಟಪಡಿಸಿದ್ದಾರೆ. ವಿರಾಟ್ ಕೊಹ್ಲಿ ತಮ್ಮ ವಿರುದ್ಧ ಮಾತನಾಡಿದ್ದ ಕಾರಣದಿಂದಾಗಿ ಸೌರವ್ ಗಂಗೂಲಿ ಶೋಕಾಸ್ ನೋಟಿಸ್ ನೀಡಲು ಮುಂದಾಗಿದ್ದರು ಎಂದು ಹೇಳಲಾಗಿತ್ತು. ಇದೀಗ ಆ ಸುದ್ದಿಯನ್ನು ಸೌರವ್ ಗಂಗೂಲಿ ಅಲ್ಲಗೆಳೆದಿದ್ದಾರೆ.









