ಭಾರತದಲ್ಲಿ ಕೊರೊನಾ ಸೋಂಕಿನ ಮೂರನೇ ಅಲೆಯ ಏರಿಳಿತ ಮುಂದುವರೆದಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2 ಲಕ್ಷದ 80 ಸಾವಿರಕ್ಕೂ ಹೆಚ್ಚು ಕೊರೊನಾ ಕೇಸ್ ಗಳು ಪತ್ತೆಯಾಗಿವೆ. ಕಳೆದ 24 ಗಂಟೆಗಳಲ್ಲಿ 2,86,384 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ, ಇದೇ ಅವಧಿಯಲ್ಲಿ 573 ಮಂದಿ ಹೆಮ್ಮಾರಿ ಸೋಂಕಿಗೆ ಬಲಿಯಾಗಿದ್ದಾರೆ. today top news in kannada saakshatv
ಕಾಂಗ್ರೆಸ್ ಹಿರಿಯ ಎಂಎಲ್ ಸಿ ಸಿಎಂ ಇಬ್ರಾಹಿಂ ಅವರು ಶೀಘ್ರದಲ್ಲಿಯೇ ಕಾಂಗ್ರೆಸ್ ಗೆ ಗುಡ್ ಬೈ ಹೇಳಲಿದ್ದಾರೆ. ಬಿ.ಕೆ.ಹರಿ ಪ್ರಸಾದ್ ಅವರನ್ನು ವಿಧಾನ ಪರಿಷತ್ ವಿಪಕ್ಷ ನಾಯಕರಾಗಿ ನೇಮಕ ಮಾಡಿದ ಬೆನ್ನಲ್ಲೆ ಸಿ.ಎಂ ಇಬ್ರಾಹಿಂ ಪಕ್ಷ ತೊರೆಯಲು ನಿರ್ಧರಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,ವಿಧಾನ ಪರಿಷತ್ ಸ್ಥಾನಕ್ಕೆ ಶೀಘ್ರದಲ್ಲೇ ರಾಜೀನಾಮೆ ನೀಡುತ್ತೇನೆ.
ಮುಂದಿನ ಪಂಚ ರಾಜ್ಯಗಳ ಚುನಾವಣೆಯ ಬಳಿಕ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಪಕ್ಷ ಅಪ್ರಸ್ತುತ ಆಗಲಿದೆ ಎಂದು ಪಂಚ ರಾಜ್ಯ ಚುನಾವಣೆಗಳ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಸ್ತಿತ್ವವೇ ಇಲ್ಲ. ಪಂಜಾಬ್ನಲ್ಲಿ ಅಧಿಕಾರ ಕಳೆದುಕೊಳ್ಳಲಿದ್ದಾರೆ. ಗೋವಾದಲ್ಲಿ ಅಧಿಕಾರಕ್ಕೆ ಬರುವ ಪರಿಸ್ಥಿತಿಯೇ ಇಲ್ಲ. ಮುಂದಿನ ಚುನಾವಣೆಯ ಬಳಿಕ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಪಕ್ಷ ಅಪ್ರಸ್ತುತ ಆಗಲಿದೆ ಎಂದಿದ್ದಾರೆ.
ಶಾಲಾ ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ, ಯಾವ ಮಕ್ಕಳಿಗೂ ಶಾಲೆಗೆ ಬರಲು ಬಲವಂತ ಇಲ್ಲ ಎಂದು ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. ಕೊಡಗಿನಲ್ಲಿ ಮಾತನಾಡಿದ ಅವರು, ಈ ವರ್ಷ ಮಕ್ಕಳಿಗೆ ಹಾಜರಾತಿ ಕಡ್ಡಾಯ ಇಲ್ಲ. ಯಾವ ಮಕ್ಕಳಿಗೂ ಶಾಲೆಗೆ ಬರಲು ಬಲವಂತ ಇಲ್ಲ. ಪರೀಕ್ಷೆಗೂ 75% ಹಾಜರಾತಿ ಕಡ್ಡಾಯ ಮಾಡುವುದಿಲ್ಲ ಎಂದು ತಿಳಿಸಿದರು.
ರಾಜ್ಯದಲ್ಲಿ ಮತ್ತೆ ಕೇಸರಿ ಶಾಲು ವರ್ಸಸ್ ಹಿಜಾಬ್ ಫೈಟ್ ಶುರುವಾಗಿದ್ದು, ಮಂಗಳೂರು, ಉಡುಪಿ ಮೂಲದ ಕೆಲವು ಶಾಲೆಗಳ ವಿದ್ಯಾರ್ಥಿಗಳು ಈ ಬಗ್ಗೆ ಪ್ರೊಟೆಸ್ಟ್ ನಡೆಸುತ್ತಿದ್ದಾರೆ. ಈ ಮಧ್ಯೆ ಹಿಜಬ್ ನಮ್ಮ ಸಂವಿಧಾನಾತ್ಮಕ ಹಕ್ಕು. ನಾವು ಹಿಜಬ್ ಹಾಕಿ ಕಾಲೇಜಿಗೆ ಹೋಗುತ್ತೇವೆ. ನಮಗೆ ಯಾವುದೇ ಆನ್ಲೈನ್ ಕ್ಲಾಸ್ ಗಳು ಬೇಡ ಎಂದು ಉಡುಪಿ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯರು ಹೇಳಿದ್ದಾರೆ.









